ಮಂಗಳೂರು, ಸೆಪ್ಟೆಂಬರ್ 02, 2025 (ಕರಾವಳಿ ಟೈಮ್ಸ್) : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ, ಜನ ಶಿಕ್ಷಣ ಟ್ರಸ್ಟ್, ನವ ಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ-2025 ಸೆಪ್ಟೆಂಬರ್ 8 ರಂದು ಬೆಳಿಗ್ಗೆ 10.30 ಗಂಟೆಗೆ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.













0 comments:
Post a Comment