ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರನ ಅಪಹರಿಸಿ ಚಿನ್ನದ ಗಟ್ಟಿ ದರೋಡೆ ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸರು : ಅಪ್ರಾಪ್ತ ಸೇರಿ ಐವರು ಅಂದರ್ - Karavali Times ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರನ ಅಪಹರಿಸಿ ಚಿನ್ನದ ಗಟ್ಟಿ ದರೋಡೆ ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸರು : ಅಪ್ರಾಪ್ತ ಸೇರಿ ಐವರು ಅಂದರ್ - Karavali Times

728x90

29 September 2025

ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರನ ಅಪಹರಿಸಿ ಚಿನ್ನದ ಗಟ್ಟಿ ದರೋಡೆ ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸರು : ಅಪ್ರಾಪ್ತ ಸೇರಿ ಐವರು ಅಂದರ್

 ಮಂಗಳೂರು, ಸೆಪ್ಟೆಂಬರ್ 29, 2025 (ಕರಾವಳಿ ಟೈಮ್ಸ್) : ಮಂಗಳೂರು ಚಾಯ್ಸ್ ಗೋಲ್ಡ್ ಚಿನ್ನದ ಅಂಗಡಿಯ ಕೆಲಸಗಾರ ಮುಸ್ತಫಾ ಎಂಬವರು ಸ್ಕೂಟರಿನಲ್ಲಿ ಸುಮಾರು ಒಂದೂವರೆ ಕೆಜಿ ತೂಕದ ಚಿನ್ನದ ಗಟ್ಟಿಯನ್ನು ತನ್ನ ಸ್ಕೂಟರಿನಲ್ಲಿ ಕೊಂಡ್ಯೊಯ್ಯುತ್ತಿದ್ದ ವೇಳೆ ಸೆ 26 ರಂದು ಮಂಗಳೂರು ಕಾರ್ ಸ್ಟ್ರೀಟ್ ವೆಂಕಟರಮಣ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಸ್ಕೂಟರ್ ತಡೆದು ಕಾರಿನಲ್ಲಿ ಅಪಹರಣ ನಡೆಸಿದ ಪ್ರಕರಣ ಬೇಧಿಸಿದ ಮಂಗಳೂರು ಸಿಸಿಬಿ ಪೊಲೀಸರು ಓರ್ವ ಅಪ್ರಾಪ್ತ ಬಾಲಕ ಸಹಿತ ಐವರನ್ನು ಸೋಮವಾರ ಬಂಧಿಸಿದ್ದಾರೆ. 

ಬಂಧಿತ ಆರೋಪಿಗಳನ್ನು ಉಳ್ಳಾಲ ಕೋಟೆಕಾರು ಗ್ರಾಮದ ಕೆ ಸಿ ರೋಡು ಮಮ್ತಾಝ್ ಕಾಂಪ್ಲೆಕ್ಸ್ 1ನೇ ಮಹಡಿ ನಿವಾಸಿ ಅಬ್ದುಲ್ ಲತೀಫ್ ಎಂಬವರ ಪುತ್ರ ಫಾರಿಶ್ (18), ಉಳ್ಳಾಲ-ಮುಕ್ಕಚ್ಚೇರಿ ಮಹಮ್ಮದ್ ಕಂಪೌಂಡ್ ನಿವಾಸಿ ಹಸನಬ್ಬ ಎಂ¨ಬವರ ಪುತ್ರ ಸಫ್ವಾನ್ (23), ಉಳ್ಳಾಲ-ಮಾಸ್ತಿಕಟ್ಟೆ ನಿವಾಸಿ ಮೊಹಮ್ಮದ್ ಬಶೀರ್ ಎಂಬವರ ಪುತ್ರ ಅರಾಫತ್ ಅಲಿ (18), ಉಳ್ಳಾಲ-ದರ್ಗಾ ಹತ್ತಿರದ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಫರಾಝ್ (19) ಹಾಗೂ ಇನ್ನೋರ್ವ ಅಪ್ರಾಪ್ತ ಬಾಲಕ ಎಂದು ಹೆಸರಿಸಲಾಗಿದೆ. 

ಸೆ 26 ರಂದು ಚಾಯ್ಸ್ ಗೋಲ್ಡ್ ಎಂಬ ಹೆಸರಿನ ಚಿನ್ನಾಭರಣದ ಅಂಗಡಿಯ ಕೆಲಸಗಾರ ಮುಸ್ತಾಫ ಎಂಬವರು ಸ್ಕೂಟರ್ ಸೀಟಿನ ಅಡಿಯಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದಾಗ ರಾತ್ರಿ ಸುಮಾರು 8.45ರ ವೇಳೆಗೆ ಮಂಗಳೂರು ಕಾರ್ ಸ್ಟ್ರೀಟ್ ವೆಂಕಟರಮಣ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಇಬ್ಬರು ಆರೋಪಿಗಳು ಸ್ಕೂಟರೊಂದರಲ್ಲಿ ಬಂದು ತಡೆದು ನಿಲ್ಲಿಸಿದ್ದು, ಇದೇ ವೇಳೆಗೆ ಕಾರಿನಲ್ಲಿ ಬಂದ ಉಳಿದ ಆರೋಪಿಗಳು ಮುಸ್ತಾಫರನ್ನು ಕಾರಿನಲ್ಲಿ ಅಪಹರಿಸಿಕೊಂಡುಹೋಗಿ ಹಲ್ಲೆ ನಡೆಸಿ ಮಂಗಳೂರು ಎಕ್ಕೂರು ಎಂಬಲ್ಲಿ ಕಾರಿನಿಂದ ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಮಂಗಳೂರು ಉತ್ತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 111/2025 ಕಲಂ 137(2), 310(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿತ್ತು. 

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಸೆ 29 ರಂದು ಐದು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದು, ಕೃತ್ಯಕ್ಕೆ ಬಳಸಿದ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ. ಕೃತ್ಯದಲ್ಲಿ ನೇರ ಭಾಗಿಯಾದ ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರು ವಶಪಡಿಸಲು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. 

ಬಂಧಿತ ಅಪ್ರಾಪ್ತ ಬಾಲಕ ಮಂಗಳೂರು ಹಂಪನಕಟ್ಟೆಯಲ್ಲಿರುವ ಚಾಯ್ಸ್ ಗೋಲ್ಡ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದವನು, ಇದೇ ಅಂಗಡಿಯಲ್ಲಿ ಈ ಹಿಂದೆ ಕೆಲಸ ಮಾಡಿಕೊಂಡಿದ್ದ ಫಾರಿಶ್ ಎಂಬಾತನಿಗೆ ಚಿನ್ನದ ಗಟ್ಟಿಯನ್ನು ಕೊಂಡುಹೋಗುವ ಮಾಹಿತಿ ನೀಡುವಂತೆ ತಿಳಿಸಿದ ಮೇರೆಗೆ ಮುಸ್ತಾಫ ಅವರು ಚಿನ್ನದ ಗಟ್ಟಿಯನ್ನು ಕೊಂಡು ಹೋಗುವ ಸಂಧರ್ಭ ಅವರ ಚಲನವಲನದ ಮಾಹಿತಿಯನ್ನು ಆರೋಪಿ ಫಾರಿಶ್ ನಿಗೆ ನೀಡಿದ್ದಾನೆ. ಅದರಂತೆ ಈ ಆರೋಪಿಗಳು ಇತರ ಆರೋಪಿಗಳೊಂದಿಗೆ ಸೇರಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಲು ಪೂರ್ವಯೋಜಿತ ಸಂಚು ರೂಪಿಸಿ, ಆರೋಪಿ ಸಫ್ವಾನ್ ಕೃತ್ಯಕ್ಕೆ ಕಾರನ್ನು ಒದಗಿಸಿದ್ದಾನೆ. ಮುಸ್ತಾಫರವರು ತನ್ನ ಸ್ಕೂಟರಿನ ಸೀಟಿನ ಅಡಿಯಲ್ಲಿ  ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದಾಗ ಆರೋಪಿಗಳಾದ ಅರಾಫತ್ ಆಲಿ ಮತ್ತು ಫರಾಝ್ ರವರು ಸುಜುಕಿ ಆಕ್ಸೆಸ್ ಸ್ಕೂಟರಿನಲ್ಲಿ ಬಂದು ಅಡ್ಡಗಟ್ಟಿ, ಇದೇ ಸಮಯ ಉಳಿದ ಆರೋಪಿಗಳು ಸಫ್ವಾನ್ ಒದಗಿಸಿದ ಬಿಳಿ ಬಣ್ಣದ ಕಾರೊಂದರಲ್ಲಿ ಬಂದು ಮುಸ್ತಾಫರವರನ್ನು ಬಲತ್ಕಾರವಾಗಿ ಕಾರಿನಲ್ಲಿ ಹಾಕಿ ಅಪಹರಿಸಿಕೊಂಡು ಹೋಗಿ ಹಲ್ಲೆ ಮಾಡಿ ಮಂಗಳೂರು ಎಕ್ಕೂರು ಎಂಬಲ್ಲಿ ಅವರನ್ನು ಕಾರಿನಿಂದ ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. 

ಪ್ರಕರಣದಲ್ಲಿ ಕೃತ್ಯಕ್ಕೆ ಉಪಯೋಗಿಸಿದ ಕೆಎ19 ಎಚ್ ಟಿ 8545 ನೋಂದಣಿ ಸಂಖ್ಯೆಯ ಸುಜುಕಿ ಆಕ್ಸೆಸ್ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಳಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಲು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. 

ಈ ಪ್ರಕರಣದ ಆರೋಪಿಗಳನ್ನು ಉಪ ಪೆÇಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ಮಂಗಳೂರು ನಗರ ಮತ್ತು ಸಹಾಯಕ ಪೆÇಲೀಸ್ ಆಯುಕ್ತರು, ಕೇಂದ್ರ ಉಪವಿಭಾಗ, ಸಹಾಯಕ ಪೆÇಲೀಸ್ ಆಯುಕ್ತರು, ಸಿಸಿಬಿ ಘಟಕ ಮಂಗಳೂರು ಅವರ ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ಪೆÇಲೀಸ್ ಠಾಣಾ ಅಧಿಕಾರಿ ಸಿಬ್ಬಂದಿಯವರು ಹಾಗೂ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಜಂಟಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿರುತ್ತಾರೆ.

  • Blogger Comments
  • Facebook Comments

0 comments:

Post a Comment

Item Reviewed: ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರನ ಅಪಹರಿಸಿ ಚಿನ್ನದ ಗಟ್ಟಿ ದರೋಡೆ ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸರು : ಅಪ್ರಾಪ್ತ ಸೇರಿ ಐವರು ಅಂದರ್ Rating: 5 Reviewed By: karavali Times
Scroll to Top