ಬೆಳ್ತಂಗಡಿ, ಸೆಪ್ಟೆಂಬರ್ 20, 2025 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಗರಿಸಿದ ಆರೋಪಿಗೆ ನ್ಯಾಯಾಲಯ 3 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಗರಿಸಿದ ಪ್ರಕರಣದಲ್ಲಿ ಆರೋಪಿ ಬೆಳ್ತಂಗಡಿ ತಾಲೂಕು, ಕೊಯ್ಯೂರು ಗ್ರಾಮದ ಉಮೇಶ್ ಗೌಡ (40) ಎಂಬಾತನನ್ನು ಬಂಧಿಸಿ ಬೆಳ್ತಂಗಡಿ ಪೆÇಲೀಸ್ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮಠ್ ಅವರು ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂದೇಶ್ ಅವರು ಆರೋಪಿಯ ಮೇಲೆ ಆರೋಪ ಸಾಬೀತಾಗಿದೆ ಎಂದು ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಆರು ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರಕಾರದ ಪರವಾಗಿ ಸಹಾಯಕ ಸಹಕಾರಿ ಅಭಿಯೋಜಕಿ ಶ್ರೀಮತಿ ಆಶಿತಾ ಅವರು ವಾದಿಸಿದ್ದಾರೆ.
0 comments:
Post a Comment