ಬಂಟ್ವಾಳ, ಸೆಪ್ಟೆಂಬರ್ 11, 2025 (ಕರಾವಳಿ ಟೈಮ್ಸ್) : ಅಕ್ರಮ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೂಂಜಾಲಕಟ್ಟೆ ಪೊಲೀಸರು ಕೃತ್ಯಕ್ಕೆ ಬಳಸಿದ ನಗದು ಹಣ, ಸೊತ್ತುಗಳ ಸಹಿತ ಆರೋಪಿಗಳನ್ನು ದಸ್ತಗಿರಿ ಮಾಡಿದ ಘಟನೆ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಪೂಂಜಾಲಕಟ್ಟೆ ಠಾಣಾ ಪಿಎಸ್ಸೈ ರಾಜೇಶ್ ಕೆ ವಿ ಅವರ ನೇತೃತ್ವದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಈ ದಾಳಿ ಸಂಘಟಿಸಿದ್ದು, ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿನ ಸರಕಾರಿ ಸ್ಥಳದಲ್ಲಿ ಆರೋಪಿಗಳಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಹಾಗೂ ಇತರರು ಈ ಅಕ್ರಮ ಕೋಳಿ ಅಂಕ ಜೂಜಾಟದಲ್ಲಿ ತೊಡಗಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ.
ಬಂಧಿತ ಆರೋಪಿಗಳಿಂದ ಹುಂಜ ಕೋಳಿ, 9430/- ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment