ಮಂಗಳೂರು, ಸೆಪ್ಟೆಂಬರ್ 26, 2025 (ಕರಾವಳಿ ಟೈಮ್ಸ್) : ಜಮೀನಿನ ನಿರಾಕ್ಷೇಪಣಾ ಪತ್ರಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕಾರ ಘಟನೆ ಸಂದರ್ಭ ಆಗಸ್ಟ್ 28 ರಂದು ಮಂಗಳೂರು ಲೋಕಾಯುಕ್ತ ಪೆÇಲೀಸ್ ಅಧಿಕಾರಿಗಳು ಪುತ್ತೂರು ತಾಲೂಕು ಕಚೇರಿಗೆ ದಾಳಿ ನಡೆಸಿದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಗದೆ ಪರಾರಿಯಾಗಿದ್ದ ಪುತ್ತೂರು ತಾಲೂಕು ತಹಶೀಲ್ದಾರ್ ಎಸ್ ಬಿ ಕೂಡಲಗಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳೂರು ನ್ಯಾಯಾಲಯ ತಿರಸ್ಕರಿಸಿದ್ದು, ಜಾಮೀನು ನಿರಾಕರಿಸಿದೆ.
ದಾಳಿ ಪ್ರಕರಣದಲ್ಲಿ ಪುತ್ತೂರು ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಎಸ್ ಎಂ ಅವರನ್ನು ಲೋಕಾಯುಕ್ತ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಪ್ರಸ್ತುತ ಅವರು ಜಾಮೀನು ಬಿಡುಗಡೆ ಹೊಂದಿದ್ದಾರೆ.
ಆದರೆ ಟ್ರ್ಯಾಪ್ ಕಾರ್ಯಾಚರಣೆ ಸಂದರ್ಭ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅರು ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದರು. ಬಳಿಕ ಅವರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸೆ 25 ರಂದು ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸುನೀತಾ ಎಸ್.ಜಿ ಅವರು ವಿಚಾರಣೆ ನಡೆಸಿ, ಆರೋಪಿ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರಿಗೆ ಜಾಮೀನು ನಿರಾಕರಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ಅವರು ವಾದಿಸಿದ್ದಾರೆ ಎಂದು ಮಂಗಳೂರು ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
0 comments:
Post a Comment