ಮಾಜಿ ಸೈನಿಕರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸವಲತ್ತು ಕಲ್ಪಿಸದ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಹಾಗೂ ಎಸಿಗಳ ವಿರುದ್ದ ಸುಮೋಟೋ ದಾಖಲಿಸಿಕೊಂಡ ಲೋಕಾಯುಕ್ತ - Karavali Times ಮಾಜಿ ಸೈನಿಕರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸವಲತ್ತು ಕಲ್ಪಿಸದ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಹಾಗೂ ಎಸಿಗಳ ವಿರುದ್ದ ಸುಮೋಟೋ ದಾಖಲಿಸಿಕೊಂಡ ಲೋಕಾಯುಕ್ತ - Karavali Times

728x90

18 September 2025

ಮಾಜಿ ಸೈನಿಕರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸವಲತ್ತು ಕಲ್ಪಿಸದ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಹಾಗೂ ಎಸಿಗಳ ವಿರುದ್ದ ಸುಮೋಟೋ ದಾಖಲಿಸಿಕೊಂಡ ಲೋಕಾಯುಕ್ತ

ಮಂಗಳೂರು, ಸೆಪ್ಟೆಂಬರ್ 18, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸೈನಿಕರ/ ಮಾಜಿ ಸೈನಿಕರ/ ಸ್ವಾತಂತ್ರ್ಯ ಹೋರಾಟಗಾರರಿಗೆ ಸರಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಒದಗಿಸಲು ನಿರ್ಲಕ್ಷ್ಯ ತೋರಿದ ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ ಗಳ ಮತ್ತು ಉಪವಿಭಾಗಾಧಿಕಾರಿಗಳ ವಿರುದ್ಧ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. 

ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು ಹಾಗೂ ಹುತಾತ್ಮ ಯೋಧರು ಮತ್ತು ಅವರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆ ತೋರಿದ ಆರೋಪವು ಕೇಳಿಬಂದ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. 

ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ಕಲ್ಪಿಸಲು ಸರ್ಕಾರದ ವಿವಿಧ ಇಲಾಖೆಗಳಿಂದ ಪೂರಕ ಸ್ಪಂದನೆ ದೊರೆಯದೆ, ವಿನಾಕಾರಣ ಲೋಕಾಯುಕ್ತ ಹಾಗೂ ಇದು ಲೋಕಾಯುಕ್ತ ಕಾಯ್ದೆಯಡಿ “ದುರಾಡಳಿತ” ವ್ಯಾಪ್ತಿಗೆ ಒಳಪಡುವುದರಿಂದ ಲೋಕಾಯುಕ್ತ ಸಂಸ್ಥೆಯಿಂದ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ.

ಸರ್ಕಾರದ ಆದೇಶಗಳು, ಸುತ್ತೋಲೆಗಳು ಹಾಗೂ ಕಾನೂನಿನ್ವಯ, ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನೀಡುವಂತೆ ಉಚ್ಛ ನ್ಯಾಯಾಲಯ ಹಾಗೂ  ಸರ್ವೋಚ್ಛ ನ್ಯಾಯಾಲಯದ ಆದೇಶಗಳು ಇದ್ದರೂ ಸರ್ಕಾರಿ ನೌಕರರು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು, ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ಹಾಗೂ ನಿವೇಶನವನ್ನು ನೀಡಲು ಯಾವುದೇ ಕ್ರಮ ಕೈಗೊಳ್ಳದೆ ತೊಂದರೆ ನೀಡುತ್ತಿರುವುದು ಕಂಡುಬಂದಿದೆÀ. 

  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನಿಗದಿತ ಸಮಯದಲ್ಲಿ ನೀಡದೆ ಸರ್ಕಾರಿ/ ಸಾರ್ವಜನಿಕ ನೌಕರ/ ಅಧಿಕಾರಿಗಳು ಭ್ರಷ್ಠಾಚಾ ನಡೆಸುತ್ತಿರುವುದು ಹಾಗೂ ಕರ್ತವ್ಯಲೋಪ ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ, ದೂರಿನಲ್ಲಿ ಹಿತಾಸಕ್ತಿ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಮಂಗಳೂರು ಮತ್ತು ಪುತ್ತೂರು ಉಪವಿಭಾಗಾಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಠಾಣಾ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾಜಿ ಸೈನಿಕರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸವಲತ್ತು ಕಲ್ಪಿಸದ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಹಾಗೂ ಎಸಿಗಳ ವಿರುದ್ದ ಸುಮೋಟೋ ದಾಖಲಿಸಿಕೊಂಡ ಲೋಕಾಯುಕ್ತ Rating: 5 Reviewed By: karavali Times
Scroll to Top