ಜಿಲ್ಲೆಯಲ್ಲಿ ಮಟ್ಕಾ, ಲಾಟರಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸೂಚನೆ - Karavali Times ಜಿಲ್ಲೆಯಲ್ಲಿ ಮಟ್ಕಾ, ಲಾಟರಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸೂಚನೆ - Karavali Times

728x90

12 September 2025

ಜಿಲ್ಲೆಯಲ್ಲಿ ಮಟ್ಕಾ, ಲಾಟರಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಸೆಪ್ಟೆಂಬರ್ 12, 2025 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ  ಅನಧಿಕೃತ ಲಾಟರಿ ಹಾವಳಿ ನಿಯಂತ್ರಣದ ಸಂಬಂಧ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಾಟರಿ ಮತ್ತು  ಮಟ್ಕಾಕ್ಕೆ ಸಂಪೂರ್ಣ ನಿಷೇಧವಿದ್ದು,  ಈ ನಿಟ್ಟಿನಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸುವಂತೆ ಅವರು ತಿಳಿಸಿದರು. 

ಸಣ್ಣ ಉಳಿತಾಯ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ ಅವರು ಮಾತನಾಡಿ, ಜಿಲ್ಲೆಯಲ್ಲಿ 2025ರ ಎಪ್ರಿಲ್ ನಿಂದ  ಜೂನ್ ವರೆಗೆ ಒಟ್ಟು 23 ಮಟ್ಕಾ ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, 25 ಆರೋಪಿಗಳ ಮೇಲೆ  ಪೆÇಲೀಸ್ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು. 

ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಉಪ ಪೆÇಲೀಸ್ ಆಯುಕ್ತ ಮಿಥುನ್ ಎಚ್.ಎನ್, ವಾಣಿಜ್ಯ ತೆರಿಗೆ ಅಧಿಕಾರಿ ದಿನೇಶ್ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಜಿಲ್ಲೆಯಲ್ಲಿ ಮಟ್ಕಾ, ಲಾಟರಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸೂಚನೆ Rating: 5 Reviewed By: karavali Times
Scroll to Top