ಮಂಗಳೂರು, ಸೆಪ್ಟೆಂಬರ್ 02, 2025 (ಕರಾವಳಿ ಟೈಮ್ಸ್) : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡಿನಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಫಝಲ್ ಹುಸೇನ್ (33) ಹಾಗೂ ನೌಶಾದ್ (32) ಎಂದು ಹೆಸರಿಸಲಾಗಿದೆ. ಬಂಧಿತ ಆರೋಪಿಗಳಿಂದ 15 ಗ್ರಾಂ ಎಂಡಿಎಂಎ, ಡಿಯೋ ಬೈಕ್, ಎರಡು ಮೊಬೈಲ್ ಪೊನ್, ಪೊರ್ಟಬಲ್ ಡಿಜಿಟಲ್ ತೂಕದ ಯಂತ್ರ ಸೇರಿ ಒಟ್ಟು 95,500/- ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಸಿಪಿ ಶ್ರೀಮತಿ ವಿಜಯಕ್ರಾಂತಿ ಅವರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಉಳ್ಳಾಲ ಠಾಣಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment