ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ - Karavali Times ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ - Karavali Times

728x90

4 September 2025

ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಮಂಗಳೂರು, ಸೆಪ್ಟೆಂಬರ್ 04, 2025 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಸಮುದಾಯದ ಸರಳ ವಿವಾಹಕ್ಕೆ ಪೆÇ್ರೀತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂಪಾಯಿ ಹಾಗೂ ಸಾಮೂಹಿಕ ವಿವಾಹವನ್ನು ಏರ್ಪಡಿಸುವ ಆಯೋಜಕರುಗಳಿಗೆ ಪೆÇ್ರೀತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗಳಿಗೆ 5 ಸಾವಿರ ರೂಪಾಯಿ ನೀಡಲಾಗುತ್ತದೆ.

ಸಾಮೂಹಿಕ ವಿವಾಹವನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ 7 ದಿನ ಮುಂಚಿತವಾಗಿ ಕಾರ್ಯಕ್ರಮ ಆಯೊಜನೆಯ ಬಗ್ಗೆ ಅರ್ಜಿ ಸಲ್ಲಿಸಬೇಕು ಮತ್ತು ವಿವಾಹ ನಡೆದ ದಿನಾಂಕದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಮೌಲಾನಾ ಆಜಾದ್ ಭವನ, ಓಲ್ಡ್‍ಕೆಂಟ್ ರಸ್ತೆ, ಪಾಂಡೇಶ್ವರ ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ https://dom.karnataka.gov.in  ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ  ಕಲ್ಯಾಣ  ಇಲಾಖೆ ಜಿಲ್ಲಾ  ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Rating: 5 Reviewed By: karavali Times
Scroll to Top