ಬಂಟ್ವಾಳ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜನ್ಮ ಜಯಂತಿ ಆಚರಣೆ
ಬಂಟ್ವಾಳ, ಸೆಪ್ಟೆಂಬರ್ 07, 2025 (ಕರಾವಳಿ ಟೈಮ್ಸ್) : ಸಂಘರ್ಷವಿಲ್ಲದೆ ಸಾಮಾಜಿಕ ನ್ಯಾಯವನ್ನು ಒದಗಿಸಿ, ಸರ್ವರಿಗೂ ಸಹಬಾಳ್ವೆ ನಡೆಸಲು ಅನುಕೂಲ ಕಲ್ಪಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳು ಕೇವಲ ಬಿಲ್ಲವ ಸಮಾಜಕ್ಕೆ ಗುರುಗಳಾಗಿರದೆ ಸಮಸ್ತ ಮಾನವ ಕುಲಕ್ಕೆ ಗುರುಗಳಾಗಿದ್ದಾರೆ ಎಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಹೇಳಿದರು.
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆ, ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಂಘ ಇವುಗಳ ಸಂಯುಕ್ತ ಸಹಯೋಗದೊಂದಿಗೆ ಬಿ ಸಿ ರೋಡಿನ ಬ್ರಹ್ಮಶ್ರೀ ನಾರಾಯಣ ಗಉರು ಸಭಾ ಭವನದಲ್ಲಿ ಸೆ 7 ರಂದು ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೂಂಜಾಲಕಟ್ಟೆ ವಸತಿ ಶಾಲೆಯಲ್ಲಿ ಧ್ಯಾನ ಮಂದಿರ ನಿರ್ಮಾಣದ ಕನಸು ನನ್ನದಾಗಿದ್ದು, ಇದೇ ಅವಧಿಯಲ್ಲಿ ಅದನ್ನು ಮಾಡಿಯೇ ಸಿದ್ದ ಎಂದು ಭರವಸೆ ನೀಡಿದರು.
ನಾರಾಯಣ ಗುರು ವಸತಿ ಶಾಲೆಯ ಮಕ್ಕಳ ಜೊತೆ ನಾನು ನನ್ನ ಹುಟ್ಟು ಹಬ್ವವನ್ನು ಆಚರಿಸಿದ್ದು, ಆ ದಿನ ನನಗೆ ಅತ್ಯಂತ ಖುಷಿ ತಂದ ದಿನವಾಗಿದೆ ಎಂದು ಶಾಸಕರು ಹೇಳಿದರು.
ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಅಧ್ಯಕ್ಷ ನಾಗೇಶ್ ಪೂಜಾರಿ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ರಾಗಿಣಿ ಮಾಧವ ಚೆಂಡ್ತಿಮಾರ್, ಪೂಂಜಾಲಕಟ್ಟೆ ವಸತಿ ಶಾಲಾ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಭಾಗವಹಿಸಿದ್ದರು.
ಬಂಟ್ವಾಳ ತಾಲೂಕು ಕಚೇರಿ ಉಪತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment