ಮಂಗಳೂರು, ಸೆಪ್ಟೆಂಬರ್ 02, 2025 (ಕರಾವಳಿ ಟೈಮ್ಸ್) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಕಾರದೊಂದಿಗೆ ಸೆಪ್ಟೆಂಬರ್ 7 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವÀ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್ ಬಾರ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಸಂದೇಶ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment