ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಹುಡುಗಿಯರು ಪ್ರಥಮ, ಥ್ರೋಬಾಲ್ ಪಂದ್ಯಾಟದಲ್ಲಿ ಹುಡುಗರು ದ್ವಿತೀಯ
ಬಂಟ್ವಾಳ, ಸೆಪ್ಟೆಂಬರ್ 04, 2025 (ಕರಾವಳಿ ಟೈಮ್ಸ್) : ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಮಟ್ಟದ ಬಾಲಕರ ಥ್ರೋಬಾಲ್ ಹಾಗೂ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಜಿಪಮೂಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ ಅವಳಿ ಪ್ರಶಸ್ತಿಗಳನ್ನು ಗೆದ್ದಕೊಂಡು ಸಾಧನೆಗೈದಿದೆ.
ಬಿ ಸಿ ರೋಡು ಸಮೀಪದ ಕಾರ್ಮೆಲ್ ಸಂಯುಕ್ತ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಬಾಲಕರ ಥ್ರೋ ಬಾಲ್ ಪಂದ್ಯಾಟದಲ್ಲಿ ಸಜಿಪಮೂಡ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದುಕೊಂಡರೆ, ಎಸ್ ವಿ ಎಸ್ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಹುಡುಗಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಜಿಪಮೂಡ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.































0 comments:
Post a Comment