ಪೆರ್ನೆ ದನ ಕದ್ದು ಹತ್ಯೆ ಮಾಡಿದ ಘಟನೆ ಬಗ್ಗೆ ಸುಳ್ಳು ಮಾಹಿತಿ ಹಾಗೂ ಸೌಹಾರ್ದತೆ ಹಾಳುಗೆಡವಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು - Karavali Times ಪೆರ್ನೆ ದನ ಕದ್ದು ಹತ್ಯೆ ಮಾಡಿದ ಘಟನೆ ಬಗ್ಗೆ ಸುಳ್ಳು ಮಾಹಿತಿ ಹಾಗೂ ಸೌಹಾರ್ದತೆ ಹಾಳುಗೆಡವಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು - Karavali Times

728x90

5 September 2025

ಪೆರ್ನೆ ದನ ಕದ್ದು ಹತ್ಯೆ ಮಾಡಿದ ಘಟನೆ ಬಗ್ಗೆ ಸುಳ್ಳು ಮಾಹಿತಿ ಹಾಗೂ ಸೌಹಾರ್ದತೆ ಹಾಳುಗೆಡವಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು

ಬಂಟ್ವಾಳ, ಸೆಪ್ಟೆಂಬರ್ 05, 2025 (ಕರಾವಳಿ ಟೈಮ್ಸ್) : ಪೆರ್ನೆಯಲ್ಲಿ ದನ ಕಳವು ಮಾಡಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಂಡು ಕೋಮು ಸೌಹಾರ್ದತೆ ಹಾಳುಗೆಡವಲು ಯತ್ನಿಸಿದ ಆರೋಪದಲ್ಲಿ ನರಸಿಂಹ ಶೆಟ್ಟಿ ಮಾಣಿ ಎಂಬಾತನ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಸೆ 4 ರಂದು ರಾತ್ರಿ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಬಗ್ಗೆ ನರಸಿಂಹ ಶೆಟ್ಟಿ ಮಾಣಿ ಎಂಬಾತನು ಮಾತನಾಡುವ ವೇಳೆ, ಘಟನೆಯ ಬಗ್ಗೆ ಸುಳ್ಳು ಸುದ್ದಿಯನ್ನು ನೀಡಿರುವುದಲ್ಲದೇ, ಧರ್ಮ-ಧರ್ಮಗಳ ನಡುವೆ ಕೋಮು ದ್ವೇಷ ಹಾಗೂ ವೈರತ್ವ ಉಂಟಾಗುವಂತೆ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುವುದು ಕಂಡುಬಂದಿದೆ. ಇದರಿಂದಾಗಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಭೀತಿ ಉಂಟಾಗುವ ಸಾಧ್ಯತೆಗಳಿರುವುದರಿಂದ ನರಸಿಂಹ ಶೆಟ್ಟಿ ಮಾಣಿ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 132/2025 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪೆರ್ನೆ ದನ ಕದ್ದು ಹತ್ಯೆ ಮಾಡಿದ ಘಟನೆ ಬಗ್ಗೆ ಸುಳ್ಳು ಮಾಹಿತಿ ಹಾಗೂ ಸೌಹಾರ್ದತೆ ಹಾಳುಗೆಡವಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು Rating: 5 Reviewed By: karavali Times
Scroll to Top