ಮಂಗಳೂರು, ಸೆಪ್ಟೆಂಬರ್ 18, 2025 (ಕರಾವಳಿ ಟೈಮ್ಸ್) : ರಾಷ್ಟ್ರವ್ಯಾಪಿ “ಸ್ವಚ್ಛತೆಯೇ ಸೇವೆ 2025” ಅಭಿಯಾನದ ಭಾಗವಾಗಿ, ಮಂಗಳೂರಿನ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯ ಸಾಗರ ಮತ್ತು ಕರಾವಳಿ ಸಮೀಕ್ಷಾ ವಿಭಾಗವು ಬುಧವಾರ ಶಾಲಾ ವಿದ್ಯಾರ್ಥಿಗಳಿಗಾಗಿ ಪೋಸ್ಟರ್ ತಯಾರಿಕೆ ಸ್ಪರ್ಧೆಯನ್ನು ಆಯೋಜಿಸಿತ್ತು. ‘ಪ್ಲಾಸ್ಟಿಕ್ ಮಾಲಿನ್ಯವನ್ನು ಸೋಲಿಸಿ’ ಎಂಬ ಥೀಮ್ ಅಡಿ ನಡೆದ ಈ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜೂನಿಯರ್ ವಿಭಾಗದಲ್ಲಿ ಮಂಗಳೂರಿನ ಕೇಂದ್ರೀಯ ವಿದ್ಯಾಲಯದ ದಕ್ಷ ಮತ್ತು ಮಂಗಳೂರಿನ ಕೇಂದ್ರೀಯ ವಿದ್ಯಾಲಯದ ವಿಷ್ಣು ಹಾಗೂ ಹಿರಿಯ ವಿಭಾಗದಲ್ಲಿ ಮಣಿಪಾಲ ಶಾಲೆಯ ಜುಲ್ಹಾ ಮರಿಯಮ್ ಮತ್ತು ಮಂಗಳೂರಿನ ಕೇಂದ್ರೀಯ ವಿದ್ಯಾಲಯದ ಆರಾಧ್ಯ ಇವರಿಗೆ ಮಂಗಳೂರಿನ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯ ಸಾಗರ ಮತ್ತು ಕರಾವಳಿ ಸಮೀಕ್ಷಾ ವಿಭಾಗದ ಉಪ ಮಹಾನಿರ್ದೇಶಕ ಮತ್ತು ಮುಖ್ಯಸ್ಥ ಡಾ. ಎನ್.ಎಂ. ಶರೀಫ್ ಬಹುಮಾನ ವಿತರಿಸಿದರು.
ಇದೇ ವೇಳೆ ಡಾ ಶರೀಫ್ ಅವರು “ಸ್ವಚ್ಛತೆಯೇ ಸೇವೆ 2025” ಅಭಿಯಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
0 comments:
Post a Comment