ಬಂಟ್ವಾಳ, ಸೆಪ್ಟೆಂಬರ್ 23, 2025 (ಕರಾವಳಿ ಟೈಮ್ಸ್) : ಪೌರ ಕಾರ್ಮಿಕರು ಪ್ರತಿ ದಿನ ಬೆಳಿಗ್ಗೆ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ಸ್ವಚ್ಛತಾ ಸೇನಾನಿಗಳಾಗಿದ್ದು, ಅವರ ಸೇವೆಯು ಶ್ಲಾಘನೀಯವಾಗಿದೆ. ಇವರಿಂದ ನಾಗರಿಕರ ಆರೋಗ್ಯ ಕಾಪಾಡುವ ಕಾರ್ಯ ಆಗುತ್ತಿದೆ. ಸಾರ್ವಜನಿಕರು ಪೌರ ಕಾರ್ಮಿಕರೊಂದಿಗೆ ಕೈ ಜೋಡಿಸಬೇಕು ಎಂದು ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ ಅವರು ಕರೆ ನೀಡಿದರು.
ಬಂಟ್ವಾಳ ಪುರಸಭಾ ವತಿಯಿಂದ ಮಂಗಳವಾರ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೇ ವೇಳೆ ಬಂಟ್ವಾಳ ಎಸ್ ವಿ ಎಸ್ ದೇವಳ ಶಾಲಾ ಕ್ರೀಡಾಂಗಣದಲ್ಲಿ ಪೌರ ಕಾರ್ಮಿಕರ ಕ್ರೀಡಾಕೂಟ ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೌರ ಕಾರ್ಮಿಕರಿಗೆ ಆರೋಗ್ಯ ವಿಮೆ ಸೌಲಭ್ಯ ಮತ್ತು ನೇರ ಪಾವತಿ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಿಸಲಾಯಿತು. ಪುರಸಭಾಧಿಕಾರಿಗಳು ಹಾಗೂ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 comments:
Post a Comment