ಮಂಗಳೂರು, ಸೆಪ್ಟೆಂಬರ್ 22, 2025 (ಕರಾವಳಿ ಟೈಮ್ಸ್) : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರವನ್ನು ತ್ವರಿತವಾಗಿ ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೆ 22 ರಂದು ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೌರ್ಜನ್ಯ ತಡೆ ಕಾಯ್ದೆಯಡಿ ಜಿಲ್ಲೆಯಲ್ಲಿ ದಾಖಲಾದ ಎಲ್ಲಾ ಪ್ರಕರಣಗಳಿಗೆ ಪರಿಹಾರ ಧನ ಮಂಜೂರು ಮಾಡಲಾಗಿದೆ. ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಅಭಿಯೋಜನೆಗೊಳಿಸಿ, ತಪ್ಪಿತಸ್ಥರಿಗೆ ನ್ಯಾಯಾಲಯದಲ್ಲಿ ಶಿಕ್ಷೆ ವಿಧಿಸುವ ಅವಶ್ಯಕತೆ ಇರುವ ಎಲ್ಲಾ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
2025 ರ ಜನವರಿ 1 ರಿಂದ ಸೆಪ್ಟೆಂಬರ್ 15 ರವರೆಗೆ ಜಿಲ್ಲೆಯಲ್ಲಿ 42 ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಇದುವರೆಗೆ 34.10 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. 22 ಪ್ರಕರಣಗಳಲ್ಲಿ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಹೇಮಲತಾ ಅವರು ಸಭೆಗೆ ತಿಳಿಸಿದರು.
ಅಲೆಮಾರಿ ಸಮುದಾಯದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಸಾಲ ಸೌಲಭ್ಯ ಯೋಜನೆಗಳನ್ನು ಆದ್ಯತೆಯಲ್ಲಿ ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಎಲ್ಲಾ ಇಲಾಖೆಗಳು ಎಸ್ ಸಿ ಪಿ ಹಾಗೂ ಟಿ ಎಸ್ ಪಿ ಕಾರ್ಯಕ್ರಮಗಳನ್ನು ನಿಗದಿತ ಕಾಲ ಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಇದರ ವಿಳಂಬವನ್ನು ಒಪ್ಪಲಾಗದು. ಫಲಾನುಭವಿ ಆಧಾರಿತ ಯೋಜನೆಗಳ ಪ್ರಯೋಜನವನ್ನು ಅರ್ಹರಿಗೆ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಜಿಲ್ಲಾ ಎಸ್ಪಿ ಡಾ ಅರುಣ್ ಕೆ, ಉಪ ಪೆÇಲೀಸ್ ಆಯುಕ್ತ ಮಿಥುನ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮೊದಲಾದವರು ಭಾಗವಹಿಸಿದ್ದರು.


















0 comments:
Post a Comment