ಬೆಂಗಳೂರು, ಸೆಪ್ಟೆಂಬರ್ 20, 2025 (ಕರಾವಳಿ ಟೈಮ್ಸ್) : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.
ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿದ್ದು, ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆ-2, 2026ರ ಎಪ್ರಿಲ್ 25 ರಿಂದ ಮೇ 9 ರವರೆಗೆ ನಡೆಯಲಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ 2026ರ ಮಾರ್ಚ್ 18 ರಿಂದ ಎಪ್ರಿಲ್ 1ರವರೆಗೆ ನಡೆಯಲಿದ್ದು, ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಮೇ 18ರಿಂದ 25 ರವರೆಗೆ ನಡೆಯಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ ಸೈಟ್ www.kseab.karnataka.gov.in ರಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೆÇೀಷಕರು ಮತ್ತು ಸಾರ್ವಜನಿಕರಿಗೆ ಆಕ್ಷೇಪಣೆಗಳನ್ನು ಅವಕಾಶ ಇದ್ದು, ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 9 ರವರೆಗೆ ಅಕ್ಷೇಪಣೆಗಳನ್ನು ಇ-ಮೇಲ್ chairpersonkseeb@gmail.com ಮೂಲಕ ಸಲ್ಲಿಸಬಹುದು.
0 comments:
Post a Comment