ಬಂಟ್ವಾಳ, ಸೆಪ್ಟೆಂಬರ್ 01, 2025 (ಕರಾವಳಿ ಟೈಮ್ಸ್) : 2024-2025ನೇ ಸಾಲಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತನ್ನ ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರು ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭ ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾದ ಟಿ ಜಿ ರಾಜಾರಾಮ್ ಭಟ್, ದೇವಿಪ್ರಸಾದ್ ಶೆಟ್ಟಿ ಸೇರಿದಂತೆ ಎಲ್ಲಾ ನಿರ್ದೇಶಕರುಗಳು, ಸಹಕಾರ ಸಂಘಗಳ ಉಪ ನಿಬಂಧಕ ಎಚ್ ಎನ್ ರಮೇಶ್, ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು.
0 comments:
Post a Comment