ಬಂಟ್ವಾಳ, ಸೆಪ್ಟೆಂಬರ್ 10, 2025 (ಕರಾವಳಿ ಟೈಮ್ಸ್) : ರಸ್ತೆ ಬದಿ ನಿಂತು ಸ್ನೇಹಿತನ ಜೊತೆ ಮಾತನಾಡುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಸಾಲೆತ್ತೂರು ಕಟ್ಟೆ ಎಂಬಲ್ಲಿ ಸೆ 8 ರಂದು ರಾತ್ರಿ ಸಂಭವಿಸಿದೆ.
ಗಾಯಗೊಂಡವರನ್ನು ಕೊಳ್ನಾಡು ನಿವಾಸಿ ಮೊಹಮ್ಮದ್ ಅಫ್ಸಲ್ ಎಂದು ಹೆಸರಿಸಲಾಗಿದೆ. ಇವರು ಸೋಮವಾರ ರಾತ್ರಿ ಸುಮಾರು 8.30ರ ವೇಳೆಗೆ ಸಾಲೆತ್ತೂರು ಕಟ್ಟೆ ಎಂಬಲ್ಲಿ ರಸ್ತೆ ಬದಿ ಸ್ನೇಹಿತನ ಜೊತೆ ಮಾತನಾಡುತ್ತಾ ನಿಂತಿದ್ದ ವೇಳೆ ಹರೀಶ್ ಪೂಂಜಾ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಅಫ್ಸಲ್ ಅವರ ಕಾಲು, ಭುಜ ಹಾಗೂ ಕೈಗೆ ಗಾಯಗಳಾಗಿದ್ದು, ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಹಿತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಇವರ ತಾಯಿ ಮೈಮೂನಾ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment