ಮಂಗಳೂರು, ಸೆಪ್ಟೆಂಬರ್ 14, 2025 (ಕರಾವಳಿ ಟೈಮ್ಸ್) : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಸೆಪ್ಟೆಂಬರ್ 16 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೆÇಲೀಸ್ ಆಯುಕ್ತರು ಮತ್ತು ಪೆÇಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚೆ, ಮಧ್ಯಾಹ್ನ 3 ಗಂಟೆಗೆ ನಗರದ ಪಂಪ್ ವೆಲ್ ಫಾದರ್ ಮುಲ್ಲರ್ಸ್ ಕನ್ವೆನ್ಷನ್ ಸೆಂಟರಿನಲ್ಲಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ, ಸಂಜೆ 5 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ, ಸಂಜೆ 6.30ಕ್ಕೆ ಮಂಗಳೂರಿನಿಂದ ಕೊಡಗು ಜಿಲ್ಲೆಗೆ ಸಚಿವರು ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment