ಬಂಟ್ವಾಳ, ಸೆಪ್ಟೆಂಬರ್ 26, 2025 (ಕರಾವಳಿ ಟೈಮ್ಸ್) : ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸತತ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ಪದ್ದೋನ್ನತಿಗೊಂಡು ಪ್ರಾಂಶುಪಾಲರಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಸರಕಾರಿ ಪದವಿಪೂರ್ವ ಕಾಲೇಜಿಗೆ ವರ್ಗಾವಣೆಗೊಂಡಿರುವ ಶ್ರೀನಿವಾಸ ನಾಯ್ಕ ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ವತಿಯಿಂದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿನಂದಿಸಿ ಗೌರವಿಸಿದರು.
ಈ ಸಂದರ್ಭ ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ವಿಶ್ವನಾಥ ಶೆಟ್ಟಿಗಾರ್, ಮಂದರಾತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ, ನವೀನ್ ಹೆಗ್ಡೆ, ಮುಖ್ಯ ಕಾರ್ಯನಿರ್Áಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.
0 comments:
Post a Comment