ಮಂಗಳೂರು, ಸೆಪ್ಟೆಂಬರ್ 10, 2025 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇವುಗಳ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಸೆಪ್ಟೆಂಬರ್ 16 ರಂದು ಅಪರಾಹ್ನ 3 ಗಂಟೆಗೆ ನಗರದ ಪಂಪ್‍ವೆಲ್ ಫಾದರ್ ಮುಲ್ಲರ್ಸ್ ಕನ್ವೆನ್ಸನ್ ಸೆಂಟರಿನಲ್ಲಿ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ, ನಡೆಯುವ ಕಾರ್ಯಕ್ರಮವನ್ನು ರಾಜ್ಯ ಕಾರ್ಮಿಕ ಇಲಾಖಾ ಸಚಿವ ಸಂತೋಷ್ ಎಸ್ ಲಾಡ್ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದು, ಶಾಸಕ ಡಿ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment