ಬಂಟ್ವಾಳ, ಸೆಪ್ಟೆಂಬರ್ 10, 2025 (ಕರಾವಳಿ ಟೈಮ್ಸ್) : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರರಿಬ್ಬರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ಸೆ 8 ರಂದು ರಾತ್ರಿ ವೇಳೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರರನ್ನು ಮುಹಮ್ಮದ್ ಇಕ್ಬಾಲ್ ಹಾಗೂ ಅಬುಸಾಲಿ ಎಂದು ಹೆಸರಿಸಲಾಗಿದೆ. ಸಜಿಪಮೂಡ ಗ್ರಾಮದ ಸುಲೈಮಾನ್ ಸಾಬಿರ್ ಎಂಬವರು ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇವರು ಕುಟುಂಬದೊಂದಿಗೆ ತನ್ನ ಗೆಳೆಯನ ಆಲ್ಟೋ ಕಾರಿನಲ್ಲಿ ತುಂಬೆ ಗ್ರಾಮದ ವಳವೂರು ಎಂಬಲ್ಲಿಗೆ ತೆರಳಿ ಮರಳಿ ಮನೆಗೆ ವಾಪಾಸು ಬರುತ್ತಿದ್ದ ವೇಳೆ ರಾತ್ರಿ ಸುಮಾರು 8 ಗಂಟೆ ಸಮಯಕ್ಕೆ ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬರುತ್ತಿದ್ದ ಸಂದರ್ಭ ಅದೇ ರಸ್ತೆಯಲ್ಲಿ ವಿರುದ್ದ ದಿಕ್ಕಿನಲ್ಲಿ ಬಂದ ಸ್ಕೂಟರ್ ಸವಾರರು ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರು ಸವಾರ ತನ್ನ ಕಾರಿನಲ್ಲಿ ಮಂಗಳೂರಿನ ಕೊಲಾಸೋ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಎರಡೂ ವಾಹನಗಳು ಜಖಂಗೊಂಡಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment