ಮಂಗಳೂರು, ಸೆಪ್ಟೆಂಬರ್ 02, 2025 (ಕರಾವಳಿ ಟೈಮ್ಸ್) : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳಾ ಪ್ರಯಾಣಿಕರೊಬ್ಬರ ಲಗೇಜ್ ಬ್ಯಾಗಿನಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಆರ್ ಇಂಡಿಯಾ ಸ್ಯಾಟ್ಸ್ ಕಂಪೆನಿಯಲ್ಲಿ ಲೋಡರ್-ಅನ್ ಲೋಡರ್ ಕೆಲಸ ಮಾಡುತ್ತಿರುವ ಮಂಗಳೂರು ತಾಲೂಕು ಕಂದಾವರ ನಿವಾಸಿ ನಿತಿನ್, ಪಡುಪೆರಾರ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಹಾಗೂ ಚಿನ್ನಾಭರಣ ಖರೀದಿಸಿದ ಪಡುಪೆರಾರ ನಿವಾಸಿ ರವಿರಾಜ್ ಎಂದು ಹೆಸರಿಸಲಾಗಿದೆ.
ಆಗಸ್ಟ್ 30 ರಂದು ಬೆಳಿಗ್ಗೆ ಮಹಿಳೆಯೋರ್ವರು ಬೆಂಗಳೂರಿನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಪ್ರಯಾಣ ಮಾಡಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್ ಬೆಲ್ಟ್ ನಿಂದ ತಮ್ಮ ಲಗೇಜನ್ನು ಪಡೆದು ಚೆಕ್ ಮಾಡಿದಾಗ 4.50 ಲಕ್ಷ ರೂಪಾಯಿ ಮೌಲ್ಯದ 56 ಗ್ರಾಂ ತೂಕದ ಚಿನ್ನಾಭರಣ ಕಳವು ಆಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಯಾಣಿಕರು ಬಜಪೆ ಪೆÇಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಅಪರಾಧ ಕ್ರಮಾಂಕ 157/2025 ಕಲಂ 303(2) ಬಿ ಎನ್ ಎಸ್ ಪ್ರಕಾರ ಕಳವು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಇಂಡಿಯಾ ಸ್ಯಾಟ್ಸ್ ಕಂಪೆನಿಯಲ್ಲಿ ಲೋಡರ್ ಅನ್ ಲೋಡರ್ ಕೆಲಸ ಮಾಡಿಕೊಂಡಿರುವ ನಿತಿನ್, ಸದಾನಂದ, ರಾಜೇಶ್ ಮತ್ತು ಪ್ರವೀಣ್ ಫೆರ್ನಾಂಡಿಸ್ ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಗಸ್ಟ್ 30 ರಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿದ್ದ ಲಗೇಜ್ ನಿಂದ ಚಿನ್ನಾಭರಣ ಕಳವು ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಆರೋಪಿಗಳು ರವಿರಾಜ್ ಎಂಬಾತನಿಗೆ ಚಿನ್ನಾಭರಣ ಮಾರಿದ್ದಾರೆ. ಆರೋಪಿತರಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 50 ಗ್ರಾಂ ಚಿನ್ನದ ಗಟ್ಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರವಿರಾಜ್ ಎಂಬವನನ್ನು ಸಹ ಕಳವು ಮಾಲನ್ನು ಸ್ವೀಕರಿಸಿದ 317(2) ಬಿ ಎನ್ ಎಸ್ ಆರೋಪದ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಈ ಹಿಂದೆ 2025ನೇ ಸಾಲಿನ ಜನವರಿ ತಿಂಗಳಿನಲ್ಲಿ ಇದೇ ರೀತಿ ಪ್ರಯಾಣಿಕ ಮನೋಹರ್ ಶೆಟ್ಟಿ ಅವರ ಬ್ಯಾಗಿನಿಂದ ಕಳವು ಮಾಡಿದ್ದ 2 ಲಕ್ಷ ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಬಜಪೆ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 27/2025 ರಂತೆ ಪ್ರಕರಣ ದಾಖಲಾಗಿ ತನಿಖೆ ಹಂತದಲ್ಲಿತ್ತು. ಈ ಎಲ್ಲಾ ಆರೋಪಿಗಳು ಸುಮಾರು 9 ವರ್ಷಗಳಿಂದ ಏರ್ ಇಂಡಿಯಾ ಸ್ಯಾಟ್ಸ್ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಬಂಧಿತ ಎಲ್ಲಾ 5 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಹೆಚ್ಚಿನ ತನಿಖೆಯ ಬಗ್ಗೆ ಪೆÇಲೀಸ್ ವಶಕ್ಕೆ ಪಡೆಯಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಕಂಡಬಂದಿರುವುದೆನೆಂದರೆ, ವಿಮಾನದ ಪ್ರಾಯಾಣಿಕರು ಬೆಲೆ ಬಾಳುವ ವಸ್ತುಗಳಾದ ಚಿನ್ನ, ನಗದನ್ನು ಬ್ಯಾಗೇಜ್ ನಲ್ಲಿ ಕಳುಹಿಸುವಾಗ ಸದ್ರಿ ಆರೋಪಿಗಳು ಬ್ಯಾಗ್ ತೆರೆದಿದ್ದಲ್ಲಿ ಹುಡುಕುವುದು. ಕೆಲವೊಮ್ಮೆ ಬ್ಯಾಗ್ ಲಾಕ್ ನ ಸುಲಭ ಪಾಸ್ ವಾರ್ಡ್ ಸಂಖ್ಯೆಗಳಿದ್ದಲ್ಲಿ ಪ್ರಯತ್ನಿಸಿ ಕಳವು ಮಾಡುತ್ತಿರುವುದು ಕಂಡು ಬರುತ್ತದೆ. ಪ್ರಯಾಣಿಕರು ಈ ರೀತಿ ನಿರ್ಲಕ್ಷ್ಯ ತೋರದೇ, ಜಾಗೃತೆಯಿಂದ ಇರುವಂತೆ ಕಮಿಷನರ್ ಸುಧೀರ್ ರೆಡ್ಡಿ ಸಾರ್ವಜನಿಕರಿಗೆ ಸೂಚಿಸಿದ್ದಾರೆ.














0 comments:
Post a Comment