ಮಂಗಳೂರು, ಸೆಪ್ಟೆಂಬರ್ 23, 2025 (ಕರಾವಳಿ ಟೈಮ್ಸ್) : ಸೌಜನ್ಯಾಪರ ಹೋರಾಟ ಸಮಿತಿಯ ಪ್ರಮುಖ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 1 ವರ್ಷ ಕಾಲ ಗಡೀಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ಗಡಿಪಾರು ಪ್ರಕ್ರಿಯೆ ನಡೆಯುತ್ತಿರುವಾಗಲೇ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಹೆಚ್ಚಿನ ಪ್ರಕರಣಗಳು ದಾಖಲಾದ ಹಿನ್ನಲೆಯಲ್ಲಿ ತುರ್ತಾಗಿ ಗಡಿಪಾರು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಮಾಹಿತಿ ನೀಡಿದ್ದಾರೆ.
0 comments:
Post a Comment