ಬಂಟ್ವಾಳ, ಸೆಪ್ಟೆಂಬರ್ 14, 2025 (ಕರಾವಳಿ ಟೈಮ್ಸ್) : ತಲೆಯ ನರದ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸೆ 13 ರಂದು ಸಂಭವಿಸಿದೆ.
ಮೃತ ವ್ಯಕ್ತಿಯನ್ನು ನರಿಕೊಂಬು ಗ್ರಾಮದ ನಾಯಿಲ ನಿವಾಸಿ ದಿವಾಕರ ಎಂದು ಹೆಸರಿಸಲಾಗಿದೆ. ಇವರು ಕಳೆದ ಎರಡು ವರ್ಷಗಳಿಂದ ತಲೆಯ ನರದ ಸಮಸ್ಯೆಗೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ 13 ರಂದು ಬೆಳಿಗ್ಗೆ ಇವರ ಪತ್ನಿ ನಮನ ಅವರು ತಾನು ಕೆಲಸ ನಿರ್ವಹಿಸುತ್ತಿದ್ದ ಎನ್ ಎಂ ಪಿ ಟಿ ಸಂಸ್ಥೆಗೆ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಬೆಡ್ ರೂಮಿನ ಕಿಟಕಿಯ ಸರಳಿಗೆ ಬಟ್ಟೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪತ್ನಿ ನಮನ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯು ಡಿ ಆರ್ ಪ್ರಕರಣ ದಾಖಲಾಗಿದೆ.
0 comments:
Post a Comment