ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆಸಾಮಿಗಳ ಬಂಧಿಸಿದ ಮಂಗಳೂರು ಪೊಲೀಸರು - Karavali Times ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆಸಾಮಿಗಳ ಬಂಧಿಸಿದ ಮಂಗಳೂರು ಪೊಲೀಸರು - Karavali Times

728x90

26 September 2025

ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆಸಾಮಿಗಳ ಬಂಧಿಸಿದ ಮಂಗಳೂರು ಪೊಲೀಸರು

ಮಂಗಳೂರು, ಸೆಪ್ಟೆಂಬರ್ 25, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆ ಹಾಗೂ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮಂಗಳೂರು ಅಬ್ಬಾಸ್ ಹಾಜಿ ಕಂಪೌಂಡ್ ನಿವಾಸಿ ದಿವಂಗತ ಕೋಳಿ ಇಸ್ಮಾಯಿಲ್ ಅವರ ಪುತ್ರ ಶೇಕ್ ಶಹಬಾಜ್ (31) ಹಾಗೂ  ಕಳೆದೊಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮಂಗಳೂರು ಕಸಬಾ ಬೆಂಗ್ರೆ ರಂಝೀನಾ ಮಂಝಿಲ್ ನಿವಾಸಿ ಹ್ಯಾರೀಸ್ ಎಂಬವರ ಪುತ್ರ ಮೊಹಮ್ಮದ್ ನಿಜಾಮುದ್ದೀನ್ ಅಲಿಯಾಸ್ ಬ್ರೋ ನಿಜಾಮ್ (30) ಎಂಬವರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. 

ವಾರಂಟ್ ಆರೋಪಿ ಶೇಕ್ ಶಹಬಾಜ್ ನನ್ನು ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಇಂದುಪುರ ತಾಲೂಕಿನ 2 ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸುರುಗೂರು ಎಂಬ ಪ್ರದೇಶದಲ್ಲಿ ತಲೆ ಮರೆಸಿ ತಿರುಗುತ್ತಿದ್ದವನನ್ನು ಬರ್ಕೆ ಠಾಣೆಯ ವಾರಂಟ್ ಸಿಬ್ಬಂದಿ ಎಚ್ ಸಿ ಚೇತನ್ ಬಿ ಆರ್ ಹಾಗೂ ಎಚ್ ಸಿ  ಮೋಹನ್ ಅವರು ಪೊಲೀಸ್ ನಿರೀಕ್ಷರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕರ ಮೇಲ್ವಿಚಾರಣೆಯಲ್ಲಿ ಇಂದುಪುರ 2 ಟೌನ್ ಠಾಣೆಯ ಸಿಐ ಅಬ್ದುಲ್ ಕರೀಂ ಹಾಗೂ ಕ್ರೈಂ ಸಿಬ್ಬಂದಿಗಳ ಸಹಾಯದಿಂದ ಸೆ 24 ರಂದು ರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಸೆ 25 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

ನ್ಯಾಯಾಲಯದ ಮುಂದೆ ಹಾಜರಾಗದೇ ತಲೆಮರೆಸಿಕೊಂಡ ಕಾರಣಕ್ಕೆ ಈತನ ವಿರುದ್ದ ಬರ್ಕೆ ಪೊಲೀಸ್ ಠಾಣೆಯಲ್ಲಿ ಸೆ 25 ರಂದು ಮೊಕದ್ದಮೆ ಸಂಖ್ಯೆ 100/2025 ಕಲಂ 269 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಈತನ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವಾರಂಟ್ ಆರೋಪಿ ಮೊಹಮ್ಮದ್ ನಿಜಾಮುದ್ದೀನ್ ಅಲಿಯಾಸ್ ಬ್ರೋ ನಿಜಾಮ್ ನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ಎಎಸ್ಸೈ ಮಚ್ಚೇಂದ್ರನಾಥ ಜೋಗಿ, ಎಚ್ ಸಿಗಳಾದ ನಾರಪ್ಪ, ಅಭಿಷೇಕ್ ಹಾಗೂ ಪಿಸಿ ವಿಠ್ಠಲ್ ಗಡದಾರ್ ಅವರು ಪೊಲೀಸ್ ನಿರೀಕ್ಷಕ ಅನಂತಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಸೆ 25ರಂದು ಸಂಜೆ 5 ಗಂಟೆಗೆ ದಸ್ತಗಿರಿ ಮಾಡಿದ್ದಾರೆ. ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಾರಣಕ್ಕೆ ಈತನ ವಿರುದ್ದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಸೆ 25ರಂದು ಮೊಕದ್ದಮೆ ಸಂಖ್ಯೆ 134/2025 ಕಲಂ 269 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  

ಈತನ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆ ಮತ್ತು ಉಡುಪಿ ನಗರ ಪೊಲೀಸ್ ಠಾಣೆಗಳಲ್ಲೂ ಕೂಡ ವಾರಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ. ಈತನ ಮೇಲೆ ಪೂರ್ವ ಪೊಲೀಸ್ ಠಾಣೆ, ಪಣಂಬೂರು ಪೊಲೀಸ್ ಠಾಣೆ, ಉರ್ವಾ ಪೊಲೀಸ್ ಠಾಣೆ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆಸಾಮಿಗಳ ಬಂಧಿಸಿದ ಮಂಗಳೂರು ಪೊಲೀಸರು Rating: 5 Reviewed By: karavali Times
Scroll to Top