ಬಂಟ್ವಾಳ, ಸೆಪ್ಟೆಂಬರ್ 05, 2025 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 126/2006 ಕಲಂ 341, 504, 326 ಐಪಿಸಿ ಪ್ರಕರಣದಲ್ಲಿ ಆರೋಪಿಯಾದ ದೇವರಾಜ್ ವಿಟ್ಲ (49) ಎಂಬಾತ ತಲೆಮರೆಸಿಕೊಂಡಿದ್ದಾಗಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ನಿವೇದಿಸಲಾಗಿದ್ದು, ಆತ ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಎಲ್ ಪಿ ಸಿ ವಾರೆಂಟ್ ಸಂಖ್ಯೆ 15/2018 ರಂತೆ ವಾರೆಂಟ್ ಹೊರಡಿಸಿತ್ತು.
ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ ವಿಟ್ಲ ಪೊಲೀಸರು ಆತ ಶ್ರೀ ತಿರುಪತಿ ತಿರುಮಲ ದೇವಸ್ಥಾನದ ಬೆಟ್ಟದಲ್ಲಿ ವಾಹನ ಪಾರ್ಕಿಂಗ್ ಕೆಲಸ ಮಾಡಿಕೊಂಡಿರುವುದಾಗಿ ತಿಳಿದು ಬಂದ ಹಿನ್ನಲೆಯಲ್ಲಿ ಅಲ್ಲಿಗೆ ತೆರಳಿದ ಪೊಲೀಸರು ಸೆಪ್ಟೆಂಬರ್ 5 ರಂದು ದಸ್ತಗಿರಿ ಮಾಡಿದ್ದಾರೆ. ಸೆ 6 ಈತನನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
0 comments:
Post a Comment