ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಹಲವು ಆರೋಪಿಗಳ ದಸ್ತಗಿರಿ - Karavali Times ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಹಲವು ಆರೋಪಿಗಳ ದಸ್ತಗಿರಿ - Karavali Times

728x90

11 September 2025

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಹಲವು ಆರೋಪಿಗಳ ದಸ್ತಗಿರಿ

ಮಂಗಳೂರು, ಸೆಪ್ಟೆಂಬರ್ 11, 2025 (ಕರಾವಳಿ ಟೈಮ್ಸ್) : ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ  ವರದಿಯಾಗಿದ್ದ  ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾತನನ್ನು ಗುರುವಾರ (ಸೆ 11) ಬೆಳಗಿನ ಜಾವ ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. 

ಈತನ ವಿರುದ್ದ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಒಟ್ಟು 13 ಪ್ರಕರಣಗಳು ದಾಖಲಾಗಿದ್ದು, ಬೇರೆ ಬೇರೆ ನ್ಯಾಯಾಲಯಗಳಲ್ಲಿ ಈತನ ವಿರುದ್ದ ವಾರೆಂಟ್ ಹೊರಡಿಸಿರುತ್ತಾರೆ.   

ಮಂಗಳೂರು ನಗರ ಕಮೀಷನರೇಟ್ ಘಟಕದಲ್ಲಿ ಕಳೆದ 3 ತಿಂಗಳಲ್ಲಿ ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಕನಿಷ್ಟ 2 ವರ್ಷದಿಂದ ಹಾಜರಾಗದೇ ತಲೆಮರೆಸಿಕೊಂಡಿದ್ದ 52 ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಕೋಮು ಗಲಭೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾದ ಚಂದ್ರಹಾಸ ಕೇಶವ್ ಶೆಟ್ಟಿಗಾರ್, ಲೀಲಾಧರ್, ಖಾದರ್ ಕುಳಾಯಿ, ಶಾಕೀಬ್, ಮೊಹಮ್ಮದ್ ಹುಸೇನ್, ರಮೀಜ್ ಸಹಿತ ಒಟ್ಟು 7 ಜನರಲ್ಲದೆ ಬೇರೆ ಬೇರೆ ಠಾಣೆಗಳಲ್ಲಿ ರೌಡಿ ಶೀಟರ್ ಗಳಾದ ಅದಿತ್ಯ ಕುಮಾರ್, ಭರತ್ ಬಾಲು, ಮೊಹಮ್ಮದ್ ಶುುಹೈಬ್, ಮೊಹಮ್ಮದ್ ಮುಸ್ತಾಫ್, ಮೊಹಮ್ಮದ್ ನಜೀಮ್, ಉಮ್ಮರ್ ನವಾಫ್, ಉಮ್ಮರ್ ಫಾರೂಕ್, ಫರಾಜ್, ಮೊಹಮ್ಮದ್ ನಿಯಾಜ್ ಸಹಿತ ಒಟ್ಟು 9 ಜನ ಹಾಗೂ ಎನ್ ಡಿ ಪಿ ಎಸ್ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಪುಂಪಾ ಕಾಶಿ, ದೀಪಾ ನಾರಾಯಣ, ಮೊಹಮ್ಮದ್ ನಿಹಾಲ್, ಮೊಹಮ್ಮದ್ ಶಫೀಕ್, ಬಾಬರ್ ಪಾಷಾ, ಮೊಹಮ್ಮದ್ ಇಕ್ಬಾಲ್, ಅಬೂಬಕರ್ ಸಹಿತ 7 ಜನ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಶಾನವಾಜ್ ಅಲಿಯಾಸ್ ಶಾನ್, ಹಾಗೂ ಕೊಲೆಯತ್ನ ಪ್ರಕರಣಗಳಲ್ಲಿ ಒಳಗೊಂಡಿರುವ ಗಣೇಶ್ ಲಕ್ಷ್ಮಣ್ ಸಾಕೇತ್, ಅದಿತ್ಯ ಕುಮಾರ್, ಅಬ್ದುಲ್ ನಾಸೀರ್, ಇಮ್ರಾನ್ ಅಲಿಯಾಸ್ ಇಂಬು, ರಮೀಜ್, ಮೊಹಮ್ಮದ್ ನಜೀಮ್ ಸಹಿತ ಒಟ್ಟು 6 ಮಂದಿ ಆರೋಪಿಗಳನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದೆ. 

ಅಲ್ಲದೇ ಹೆಚ್ಚು ಅವಧಿಯಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ನ್ಯಾಯಲಯದಿಂದ ವಾರೆಂಟ್ ಹೊರಡಿಸಿರುವ ಆರೋಪಿಗಳಾದ ವಿಶಾಲ್ ಕುಮಾರ್, ಮೊಹಮ್ಮದ್ ನಿಹಾಲ್, ಇರ್ಷಾದ್, ಹನೀಫ್ ಕೊಕ್ಕಡ ಮೊದಲಾದ 12 ಜನ ಆರೋಪಿಗಳ ವಿರುದ್ಧ ಹೆಚ್ಚುವರಿಯಾಗಿ ಕಲಂ 208, 209, 269 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲು ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಹಲವು ಆರೋಪಿಗಳ ದಸ್ತಗಿರಿ Rating: 5 Reviewed By: karavali Times
Scroll to Top