ಉಪ್ಪಿನಂಗಡಿ, ಸೆಪ್ಟೆಂಬರ್ 17, 2025 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 140/2013 ಕಲಂ 354(ಎ), (ಡಿ) ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಂಗಳೂರು, ಶಿವಾಜಿನಗರ ಮೂಲದ ಇಮ್ರಾನ್ ಖಾನ್ (36) ಎಂಬಾತ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಎಲ್ ಪಿ ಸಿ ವಾರೆಂಟ್ ಹೊರಡಿಸಿತ್ತು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬೆಂಗಳೂರು ನಗರದ ಕೆ ಜಿ ಹಳ್ಳಿ ಎಂಬಲ್ಲಿಂದ ಸೆ 13 ರಂದು ದಸ್ತಗಿರಿ ಮಾಡಿದ್ದಾರೆ. ಆತನನ್ನು ಸೆ 14 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
16 September 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment