ಬಂಟ್ವಾಳ, ಸೆಪ್ಟೆಂಬರ್ 27, 2025 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 26/ 2018 ಕಲಂ 447, 341, 504, 323, 324, 354, 506 ಆರ್/ಡಬ್ಲ್ಯು 34 ಐಪಿಸಿ ಪ್ರಕರಣದ ಆರೋಪಿ, ಅಳಿಕೆ ನಿವಾಸಿ ಮಹಮ್ಮದ್ ಇರ್ಷಾದ್ ಕೆ ಎ ಅಲಿಯಾಸ್ ಇರ್ಷಾದ್ (32) ಎಂಬಾತ ತಲೆ ಮರೆಸಿಕೊಂಡಿದ್ದು, ನ್ಯಾಯಲಯವು ಸಿಸಿ 1565/2023 ರಂತೆ ವಾರಂಟ್ ಹೊರಡಿಸಿತ್ತು. ಸದ್ರಿ ಆರೋಪಿಯನ್ನು ಸೆ 26 ರಂದು ಅಳಿಕೆ ಎಂಬಲ್ಲಿ ದಸ್ತಗಿರಿ ಮಾಡಿದ ವಿಟ್ಲ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತನ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆ, ಬಂಟ್ವಾಳ ನಗರ ಪೊಲೀಸ್ ಠಾಣೆ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment