ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ಮೂಲಕ ಉದ್ಯೋಗಾವಕಾಶ - Karavali Times ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ಮೂಲಕ ಉದ್ಯೋಗಾವಕಾಶ - Karavali Times

728x90

4 September 2025

ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ಮೂಲಕ ಉದ್ಯೋಗಾವಕಾಶ

ಮಂಗಳೂರು, ಸೆಪ್ಟೆಂಬರ್ 04, 2025 (ಕರಾವಳಿ ಟೈಮ್ಸ್) : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ.     

ಈ ನಿಟ್ಟಿನಲ್ಲಿ ಇಲಾಖೆಯ ಅಧೀನದಲ್ಲಿ ಬರುವ ಸರಕಾರಿ ತರಬೇತಿ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ ಹಾಗೂ ಸಿಡಾಕ್ ಸಂಸ್ಥೆಗಳ ಮೂಲಕ ಉಚಿತ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824-2453222 ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ಮೂಲಕ ಉದ್ಯೋಗಾವಕಾಶ Rating: 5 Reviewed By: karavali Times
Scroll to Top