ಮಂಗಳೂರು, ಸೆಪ್ಟೆಂಬರ್ 12, 2025 (ಕರಾವಳಿ ಟೈಮ್ಸ್) : ಫೇಸ್ ಬುಕ್ ಖಾತೆಯಲ್ಲಿ ಮುಖ್ಯಮಂತ್ರಿಗಳ ವಿರುದ್ದ ಬರಹ ಪೋಸ್ಟ್ ಮಾಡಿದ್ದ ಮಹೇಶ್ ವಿಕ್ರಂ ಹೆಗ್ಡೆ (45) ಎಂಬಾತನನ್ನು ಮೂಡಬಿದ್ರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಸೆ 9 ರಂದು ಮಹೇಶ್ ವಿಕ್ರಂ ಹೆಗ್ಡೆ ಎಂಬವರು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಕಾರ್ಡ್ ಹೆಸರಿನಲ್ಲಿ “ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಲೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ” ಎಂಬ ಬರಹವನ್ನು ಪೋಸ್ಟ್ ಮಾಡಿದ್ದು, ಈ ಬಗ್ಗೆ ಮೂಡಬಿದರೆ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 143/2025 ಕಲಂ 353(2) ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಮೂಡಬಿದ್ರೆ ಪೆÇಲೀಸರು ಬೆಂಗಳೂರಿನಲ್ಲಿ ಇವರನ್ನು ವಶಕ್ಕೆ ಪಡೆದು ಶುಕ್ರವಾರ (ಸೆ 12) ಮೂಡಬಿದ್ರೆ ಸಿ.ಜೆ ಮತ್ತು ಕೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಮಹೇಶ್ ವಿಕ್ರಂ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

















0 comments:
Post a Comment