ಬಂಟ್ವಾಳ, ಅಕ್ಟೋಬರ್ 29, 2025 (ಕರಾವಳಿ ಟೈಮ್ಸ್) : ಸ್ಕೂಟರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಗಾಯಗೊಂಡ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಅಟೋ ರಿಕ್ಷಾ ನಿಲ್ದಾಣದ ಬಳಿ ಅ 26 ರಂದು ನಡೆದಿದೆ.
ಈ ಬಗ್ಗೆ ಬೆಳ್ತಂಗಡಿ ತಾಲೂಕು, ಓಡಿಲ್ನಾಳ ಗ್ರಾಮದ ಮರಿಕೆ ನಿವಾಸಿ ಕಮಲಾಕ್ಷ (24) ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇವರು ತನ್ನ ಸ್ಕೂಟರಿನಲ್ಲಿ ಮಂಗಳೂರು ಕಡೆಯಿಂದ ಬಿ ಸಿ ರೋಡು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಾ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಆಟೋ ರಿಕ್ಷಾ ನಿಲ್ದಾಣದ ಬಳಿ ತಲುಪುತ್ತಿದ್ದಂತೆ ಸಂಜೆ ಸುಮಾರು 5.20 ರ ವೇಳೆಗೆ ನೇರಳಕಟ್ಟೆ ಕಡೆಯಿಂದ ಬರುತ್ತಿದ್ದ ಸ್ಕೂಟರನ್ನು ಅದರ ಸವಾರ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ವಾಹನ ಗಮನಿಸದೇ ಕಮಲಾಕ್ಷ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಮೇತ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅಪಘಾತಪಡಿಸಿದ ಸ್ಕೂಟರ್ ಸವಾರನಿಗೂ ಗಾಯವಾಗಿರುತ್ತದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















0 comments:
Post a Comment