ಬಂಟ್ವಾಳ, ಅಕ್ಟೋಬರ್ 08, 2025 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ನಿವಾಸಿ ಪಿ ಜೆ ಅಬ್ದುಲ್ ರಹಿಮಾನ್ ಯಾನೆ ಅದ್ದಾಕ (63) ಅವರು ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 7 ರಂದು ಮಂಗಳವಾರ ಸಂಜೆ ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಮನೆಯಲ್ಲೇ ಇದ್ದ ಇವರಿಗೆ ಮಂಗಳವಾರ ಸಂಜೆ ಹಠಾತ್ ಅನಾರೋಗ್ಯ ಉಲ್ಭಣಿಸಿದ ಪರಿಣಾಮ ತುಂಬೆ ಫಾದರ್ ಮುಲ್ಲರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸಗೆ ಸ್ಪಂದಿಸದ ಅವರು ನಿಧನರಾಗಿದ್ದಾರೆ.
ಅ 8 ರಂದು ಬುಧವಾರ ಸುಬುಹಿ ನಮಾಝ್ ಬಳಿಕ ಅಕ್ಕರಂಗಡಿ ಕೇಂದ್ರ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ. ಮೃತರು ಪತ್ನಿ, ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬೂಸ್ವಾಲಿಹ್ ಫೈಝಿ ಅಕ್ಕರಂಗಡಿ ಸಹಿತ ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.













0 comments:
Post a Comment