ಮಾರಿಪಳ್ಳ : ಜಾನುವಾರು ಹತ್ಯಾ ಆರೋಪಿಯ ಅಕ್ರಮ ಕಸಾಯಿ ಖಾನೆ ಜಪ್ತಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times ಮಾರಿಪಳ್ಳ : ಜಾನುವಾರು ಹತ್ಯಾ ಆರೋಪಿಯ ಅಕ್ರಮ ಕಸಾಯಿ ಖಾನೆ ಜಪ್ತಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

2 October 2025

ಮಾರಿಪಳ್ಳ : ಜಾನುವಾರು ಹತ್ಯಾ ಆರೋಪಿಯ ಅಕ್ರಮ ಕಸಾಯಿ ಖಾನೆ ಜಪ್ತಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಬಂಟ್ವಾಳ, ಅಕ್ಟೋಬರ್ 02, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಮೊದಲ ಬಾರಿಗೆ ಆರೋಪಿಯ ಮನೆ/ ಅಕ್ರಮ ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ನಡೆದಿದೆ. 

ಪುದು ಗ್ರಾಮದ ಮಾರಿಪಳ್ಳ ಸಮೀಪದ ಪಾಡಿ ನಿವಾಸಿ ಹಸನಬ್ಬ ಎಂಬವರಿಗೆ ಸೇರಿದ ಪುದು ಗ್ರಾಮ ಪಂಚಾಯತ್ ಕದ ನಂಬ್ರ 6-54 ಹಾಗೂ 6-54(1) ರ ಮನೆಯನ್ನು ಅಕ್ರಮ ಕಸಾಯಿ ಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ. 

ಹಸನಬ್ಬ ಎಂಬಾತ ಗೋ ಕಳವು, ಗೋವಧೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತನ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 123/2025 ಕಲಂ 303 ಬಿ ಎನ್ ಎಸ್ ಕಲಂ 4,7,12 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

ಈತನ ವಿರುದ್ದ 2017ನೇ ಸಾಲಿನಲ್ಲಿ ಅಪರಾಧ ಕ್ರಮಾಂಕ 65/2017 ಕಲಂ 379 ಐಪಿಸಿ ಮತ್ತು 4,5,11 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆ, 2008ನೇ ಸಾಲಿನಲ್ಲಿ ಅಪರಾಧ ಕ್ರಮಾಂಕ 88/2018 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆಯಂತೆ ಪ್ರಕರಣಗಳು ದಾಖಲಾಗಿವೆ. ಈತ ಗೋ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಕಳವು ಮಾಡಿ ತಂದಂತಹ ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿಯೇ ಕಸಾಯಿಖಾನೆ ನಿರ್ಮಾಣ ಮಾಡಿ ವಧೆಗೈದು ಮಾಂಸ ಮಾಡುತ್ತಿದ್ದು, ಈತನನ್ನು ನಿಯಂತ್ರಿಸಲು ಮನೆಯಲ್ಲಿಯೇ ಅಕ್ರಮವಾಗಿ ನಿರ್ಮಾಣ ಮಾಡಿರುವ ಈತನ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮಂಗಳೂರು ಸಹಾಯಕ ಆಯುಕ್ತರು  ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳಿಗೆ ಪೊಲೀಸರು ವರದಿ ಸಲ್ಲಿಸಿದ್ದರು. 

ಪೊಲೀಸರ ಮನವಿಯಂತೆ ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಕಲಂ 8(4) 8(5) ಅಡಿಯಲ್ಲಿ ಸೆ 25 ರಂದು  ಪ್ರಕರಣ ಸಂಖ್ಯೆ ಎಂ ಎ ಜಿ/ ಎಸ್ ಆರ್ 44/2025 ರಂತೆ ಠಾಣಾ ಅಪರಾಧ ಕ್ರಮಾಂಕ 123/2025ರಂತೆ ಹಸನಬ್ಬನ ವಶದಲ್ಲಿರುವ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ  ಮಾರಿಪಳ್ಳ ಪಾಡಿ ಎಂಬಲ್ಲಿರುವ ಮನೆ ನಂಬ್ರ 6-54 ಹಾಗೂ 6-54(1) ಕ್ಕೊಪ್ಪಿದ ಮನೆ/ ಅಕ್ರಮ ಕಸಾಯಿ ಕಾಣೆಯನ್ನು ಜಪ್ತು ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ. ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲು ಎಂದು ಜಿಲ್ಲಾ ಎಸ್ಪಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾರಿಪಳ್ಳ : ಜಾನುವಾರು ಹತ್ಯಾ ಆರೋಪಿಯ ಅಕ್ರಮ ಕಸಾಯಿ ಖಾನೆ ಜಪ್ತಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top