ಬಂಟ್ವಾಳ, ಅಕ್ಟೋಬರ್ 23, 2025 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಗ್ರಾಮದ ಬೊಂಡಾಲ ಎಂಬಲ್ಲಿನ ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಮಾರಾಟಕ್ಕೆಂದು ಇಟ್ಟಿದ್ದ ಮದ್ಯ ಹಾಗೂ ಮಾರಾದ ಮಾಡಿ ಬಂದ ಹಣವನ್ನು ವಶಕ್ಕೆ ಪಡೆದುಕೊಂಡ ಘಟನೆ ಬುಧವಾರ ನಡೆದಿದೆ.
ಆರೋಪಿಯನ್ನು ಇಲ್ಲಿನ ನಿವಾಸಿ ಹರ್ಷಿತ್ (36) ಎಂದು ಹೆಸರಿಸಲಾಗಿದೆ. ಬಂಟ್ವಾಳ ನಗರ ಠಾಣಾ ಪಿಎಸ್ಸೈ ದುರುಗಪ್ಪ ಕಲಘಟಗಿ ಅವರು ಬುಧವಾರ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ ಪಾಣೆಮಂಗಳೂರು ಗ್ರಾಮದ ಬೊಂಡಾಲ ಎಂಬಲ್ಲಿ ಹರ್ಷಿತ್ ಅವರ ಮಾಲಕತ್ವದ ದಿನಸಿ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಅಧಿಕ ಬೆಲೆಗೆ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಈ ದಾಳಿ ನಡೆಸಿದ್ದಾರೆ.
ದಾಳಿ ವೇಳೆ 1,150/- ರೂಪಾಯಿ ಮೌಲ್ಯದ 90 ಮಿ ಲೀ ತೂಕದ 23 ಸ್ಯಾಚೆಟ್ (ಒಟ್ಟು 2.70 ಲೀಟರ್) ಮೈಸೂರು ಲ್ಯಾನ್ಸರ್ ವಿಸ್ಕಿ, ಮದ್ಯ ಮಾರಾಟದಿಂದ ಬಂದ 1,030/- ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















0 comments:
Post a Comment