ವಿಟ್ಲ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ಕೊರತೆ ಪರಿಹಾರ ಹಾಗೂ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ - Karavali Times ವಿಟ್ಲ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ಕೊರತೆ ಪರಿಹಾರ ಹಾಗೂ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ - Karavali Times

728x90

15 October 2025

ವಿಟ್ಲ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ಕೊರತೆ ಪರಿಹಾರ ಹಾಗೂ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು, ಅಕ್ಟೋಬರ್ 15, 2025 (ಕರಾವಳಿ ಟೈಮ್ಸ್) : ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬಂದಿ, ವೈದ್ಯರ ಕೊರತೆ ಇದ್ದು ಅದನ್ನು ತಕ್ಷಣ ಪರಿಹರಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಅ 15 ರಂದು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ವಿಟ್ಲ ಸಮುದಾಯ ಕೇಂದ್ರದಲ್ಲಿ ಕಳೆದ ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಅಲ್ಲಿ ವೈದ್ಯರ ಕೊರತೆಯಿಂದ ಜನರಿಗೆ ಸಂಕಷ್ಟ ಉಂಟಾಗಿದೆ. ವಿಟ್ಲದಲ್ಲಿ ಬೇರೆ ಯಾವುದೇ ಆಸ್ಪತ್ರೆ ಇಲ್ಲದ ಕಾರಣ ತುರ್ತು ಸಂಧರ್ಭದಲ್ಲಿ ತೀವ್ರ ತೊಂದರೆಯನ್ನು ಅನುಭವಿಸಬೇಕಾಗಿ ಬಂದಿದೆ. ಜೊತೆಗೆ ಸಿಬಂದಿಗಳ ಕೊರತೆಯೂ ಇದೆ. ತಕ್ಷಣ ಈ ಬಗ್ಗೆ ಮುತುವರ್ಜಿ ವಹಿಸಿ ಪರಿಹರಿಸುವಂತೆ ಮನವಿ ಮಾಡಿದರು.

ವಿಟ್ಲ ಸಮುದಾಯ ಕೇಂದ್ರ ಸುಸಜ್ಜಿತವಾದ ಕಟ್ಟಡವನ್ನು ಹೊಂದಿದ್ದು ಸೌಲಭ್ಯಗಳ ಕೊರತೆ ಮಾತ್ರ ಇದೆ. ಈ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಪ್ರಾರಂಭ ಮಾಡುವಂತೆಯೂ ಸಚಿವರಿಗೆ ಶಾಸಕರು ಮನವಿ ಮಾಡಿದರು. ಶಾಸಕರ ಮನವಿಗೆ ಸಚಿವರು ಸ್ಪಂದಿಸಿದ್ದು ಶೀಘ್ರ ಕ್ರಮಕ್ಕೆ ಸೂಚನೆಯನ್ನು ನೀಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ವಿಟ್ಲ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ಕೊರತೆ ಪರಿಹಾರ ಹಾಗೂ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Rating: 5 Reviewed By: karavali Times
Scroll to Top