ಮಂಗಳೂರು, ಅಕ್ಟೋಬರ್ 09, 2025 (ಕರಾವಳಿ ಟೈಮ್ಸ್) : 2025-26ನೇ ಸಾಲಿನಲ್ಲಿ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖಾ ವೆಬ್ ಸೈಟ್ www.schooleducation.karnataka.gov.in/ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿದ್ದು, ನವೆಂಬರ್ 3 ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವಾಗಿದೆ. ದಾಖಲಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಇಲಾಖಾ ವೆಬ್ ಸೈಟಿನಲ್ಲಿ ಅಳವಡಿಸಲಾಗಿದೆ ಎಂದು ಸರಕಾರಿ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ಹಾಗೂ ಸಹ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment