ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಬ್ಯಾರಿ ಭಾಷಾ ದಿನಾಚಣೆ
ಮಂಗಳೂರು, ಅಕ್ಟೋಬರ್ 03, 2025 (ಕರಾವಳಿ ಟೈಮ್ಸ್) : ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಬ್ಯಾರಿ ಭಾಷಾ ದಿನಾಚರಣೆ ನಗರದ ಮಂಗಳೂರು ವಿವಿ ಕಾಲೇಜು ರವೀಂದ್ರ ಕಲಾಭವನದಲ್ಲಿ ಅ 3 ರಂದು ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು, ಭಾಷೆಯ ಮೇಲೆ ಅಭಿಮಾನ ಮತ್ತು ಹೆಮ್ಮೆ ಬೇಕು. ಆದರೆ ಅದು ಯಾವತ್ತೂ ಸಂಘರ್ಷಕ್ಕೆ ಎಡೆಮಾಡಿಕೊಡಬಾರದು. ಭಾಷೆಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಸೌಹಾರ್ದ ವಾತಾವರಣ ರೂಪಿಸಬೇಕಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಫಾರೂಕ್ ಉಳ್ಳಾಲ್ ಬ್ಯಾರಿ ಭಾಷಾ ದಿನಾಚರಣೆ ಬಗ್ಗೆ ಉಪನ್ಯಾಸಗೈದರು. ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲ ಪೆÇ್ರ ಗಣಪತಿ ಗೌಡ ಎಸ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬೆಳವಣಿಗೆಯ ನಿಟ್ಟಿನಲ್ಲಿ ಶ್ರಮಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯರುಗಳಾದ ಆಲಿಯಬ್ಬ ಜೋಕಟ್ಟೆ, ಯೂಸುಫ್ ವಕ್ತಾರ್, ಹುಸೈನ್ ಕಾಟಿಪಳ್ಳ ಅವರನ್ನು ಗೌರವಿಸಲಾಯಿತು. ಬ್ಯಾರಿ ಅಧ್ಯಯನ ಪೀಠದ ಸದಸ್ಯ ಬಿ.ಎ. ಮುಹಮ್ಮದ್ ಹನೀಫ್ ಅಭಿನಂದನಾ ಭಾಷಣ ಮಾಡಿದರು.
ಅಧ್ಯಯನ ಪೀಠದ ಸದಸ್ಯರಾದ ಉಮರ್ ಯು.ಎಚ್., ಬಶೀರ್ ಬೈಕಂಪಾಡಿ, ಖಾಲಿದ್ ತಣ್ಣೀರುಬಾವಿ, ಮೊಯಿದಿನ್ ಬಾದುಷಾ ಸಾಂಬಾರತೋಟ, ಹಂಝ ಮಲಾರ್ ಭಾಗವಹಿಸಿದ್ದರು.
ಅಧ್ಯಯನ ಪೀಠದ ಸಂಯೋಜಕ ಡಾ ಅಬೂಬಕರ್ ಸಿದ್ದೀಕ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಸದಸ್ಯ ಡಾ. ಎನ್. ಇಸ್ಮಾಯೀಲ್ ವಂದಿಸಿದರು. ವಿದ್ಯಾರ್ಥಿನಿ ಆಯಿಶಾ ನಫೀಹಾ ಕಾರ್ಯಕ್ರಮ ನಿರೂಪಿಸಿದರು.




















0 comments:
Post a Comment