ಬಂಟ್ವಾಳ, ಅಕ್ಟೋಬರ್ 10, 2025 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್ ಎಂಬಾತನು ಅ 10 ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇಲ್ಲಿಗೆ ಹಾಜರಾಗಿದ್ದು, ನ್ಯಾಯಾಲಯವು ಆರೋಪಿಗೆ ಅ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಅಬ್ದುಲ್ ರಹಿಮಾನ್ ಕೊಲೆ ಹಾಗೂ ಶಾಫಿ ಮೇಲಿನ ಕೊಲೆ ಯತ್ನ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಭರತ್ ಕುಮ್ಡೆಲ್ ಪ್ರಕರಣ ದಾಖಲಾದ ದಿನದಿಂದಲೇ ತಲೆಮೆರೆಸಿಕೊಂಡಿದ್ದ.
ಈತನ ಮೇಲೆ ಬಂಟ್ವಾಳ ನಗರ, ಗ್ರಾಮಾಂತರ, ಪುತ್ತೂರು ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟು 15 ಪ್ರಕರಣ ದಾಖಲಾಗಿದೆ.
0 comments:
Post a Comment