ಬಂಟ್ವಾಳ, ಅಕ್ಟೋಬರ್ 05, 2025 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಲಮುಡ್ನೂರು ಗ್ರಾಮದ ಭಗವಂತಕೋಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಗೊಂಡ ಬಾಲಕಿಯನ್ನು ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ನಿವಾಸಿ ರಶ್ಮಿಯಾ ಎಂಬವರ ಪುತ್ರಿ ಶೈಮಾ ಫಾತಿಮಾ (11) ಎಂದು ಹೆಸರಿಸಲಾಗಿದೆ. ಶೈಮಾ ಫಾತಿಮಾ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತಫ್ಸೀರ್ ಎಂಬವರು ಚಾಲಕನಾಗಿ ಶಹೀರ್ ಎಂಬವರು ಸಹಸವಾರನಾಗಿ ಚಲಾಯಿಸಿಕೊಂಡು ಬಂದ ಬೈಕ್ ಹಿಂದಿನಿಂದ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಘಟನೆಯಿಂದ ಬಾಲಕಿ ಫಾತಿಮಾ ಶೈಮಾ ಹಾಗೂ ಬೈಕ್ ಸವಾರರು ರಸ್ತೆಗೆ ಬಿದ್ದಿದ್ದಾರೆ. ಬಾಲಕಿ ಶೈಮಾ ಹಾಗೂ ಬೈಕ್ ಸವಾರನಿಗೂ ಗಾಯಗಳಾಗಿವೆ. ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment