ಬಂಟ್ವಾಳ, ಅಕ್ಟೋಬರ್ 10, 2025 (ಕರಾವಳಿ ಟೈಮ್ಸ್) : ವಿದ್ಯುತ್ ಚಾಲಿತ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಬಿ ಕಸಬಾ ಗ್ರಾಮದ ಭಂಡಾರಿಬೆಟ್ಟು ಎಂಬಲ್ಲಿ ಅ 8 ರಂದು ಸಂಜೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ಸ್ಥಳೀಯ ನಿವಾಸಿ ಆಲ್ವಿನ್ ಮಿನೇಜಸ್ (60) ಎಂದು ಹೆಸರಿಸಲಾಗಿದೆ. ಇವರು ತನ್ನ ವಿದ್ಯುತ್ ಚಾಲಿತ ಸ್ಕೂಟರಿನಲ್ಲಿ ಕಡೂರು-ಬಿ ಸಿ ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ತುಂಬ್ಯೆ ಜಂಕ್ಷನ್ ಮಾರ್ಗವಾಗಿ ಬಿ ಸಿ ರೋಡು ಕಡೆಗೆ ಬರುತ್ತಿರುವಾಗ ಸಂಜೆ 5.30 ರ ವೇಳೆಗೆ ಬಿ ಕಸಬಾ ಗ್ರಾಮದ ಭಂಡಾರಿಬೆಟ್ಟು ಎಂಬಲ್ಲಿಗೆ ತಲುಪಿದಾಗ ಡಿವೈಡರ್ ತೆರೆದ ಸ್ಥಳದಲ್ಲಿ ಸೂಚನೆ ನೀಡಿ ಸ್ಕೂಟರನ್ನು ಬಲಭಾಗಕ್ಕೆ ಯು- ಟರ್ನ್ ಮಾಡುತ್ತಿರುವಾಗ ಹಿಂಬದಿಯಿಂದ ಅಂದರೆ ಕಡೂರು ಕಡೆಯಿಂದ ಬಿ ಸಿ ರೋಡು ಕಡೆಗೆ ಶಶಿಧರ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಸವಾರ ಆಲ್ವಿನ್ ಮೆನೇಜಸ್ ಅವರ ತೊಡೆ ಹಾಗೂ ಪಕ್ಕೆಲುಬಿಗೆ ಗಾಯಗಳಾಗಿವೆ. ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment