ಮಂಗಳೂರು, ಅಕ್ಟೋಬರ್ 27, 2025 (ಕರಾವಳಿ ಟೈಮ್ಸ್) : ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಿಗೆ 2025-26ನೇ ಸಾಲಿನಲ್ಲಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ https://kccdclonline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಯೋಜನೆಗಳ ವಿವರ : ಅರಿವು ವಿಧ್ಯಾಭ್ಯಾಸ ಸಾಲ ಯೋಜನೆ, ವಿದೇಶಿ ವಿಧ್ಯಾಭ್ಯಾಸ ಸಾಲಯೋಜನೆ, ಸ್ವಾಲಂಬಿ ಸಾರಥಿ ಯೋಜನೆ (ಟ್ಯಾಕ್ಸಿ ಮತ್ತು ಆಟೋರಿಕ್ಷಾ ವಾಹನ ಖರೀದಿಸಲು ಸಹಾಯಧನ ಯೋಜನೆ), ಶ್ರಮಶಕ್ತಿ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ/ ನೇರಸಾಲ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಸಮುದಾಯ ಆಧಾರಿತ ಕೌಶಲ್ಯ ಅಭಿವೃದ್ದಿ ತರಬೇತಿಗಳು, ಡ್ರೋನ್ ಮೂಲ ಕಾರ್ಯಾಚರಣೆಗಳು, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಪದವೀಧರರು/ ಪದವೀಧರರಲ್ಲದವರಿಗೆ ಉದ್ಯೋಗ ಆಧಾರಿತ ಅಲ್ಪಾವಧಿ ತರಬೇತಿ, ಕೇಂದ್ರ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆಗೆ ತರಬೇತಿ.
ಅರ್ಜಿಯನ್ನು ನಗರದ ಪಾಂಡೇಶ್ವರದ ಮೌಲಾನಾ ಅಜಾದ್ ಭವನದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824-2951644, ಸಹಾಯವಾಣಿ ಸಂಖ್ಯೆ 6360753075 ಸಂರ್ಪಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

















0 comments:
Post a Comment