ಬಂಟ್ವಾಳ, ಅಕ್ಟೋಬರ್ 13, 2025 (ಕರಾವಳಿ ಟೈಮ್ಸ್) : ಹೆಣ್ಣು ನೋಡುವ ನೆಪದಲ್ಲಿ ಕೇರಳದ ಗಲ್ಫ್ ಉದ್ಯಮಿಯನ್ನು ಮಂಗಳೂರಿಗೆ ಕರೆಸಿ ಫೋಟೋ ವೀಡಿಯೋ ತೆಗೆದು ಬೆದರಿಸಿ ಲಕ್ಷಾಂತರ ರೂಪಾಯಿ ಪೀಕಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕೇರಳದ ಗಲ್ಫ್ ಉದ್ಯೋಗಿ ಮಹಮ್ಮದ್ ಅಶ್ರಫ್ ತಾವರಕಡನ್ (53 ಅವರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಇವರು 2024ರ ಸೆಪ್ಟೆಂಬರ್‍ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಬಶೀರ್, ಸಫಿಯಾ ಮತ್ತು ಇತರ ಆರೋಪಿತರು ಅವರನ್ನು ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ ಎಂದು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 145/2025 ಕಲಂ 318(4), 308(2), 115(2), 351(2), ಆರ್/ಡಬ್ಲ್ಯು 3(5) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.














0 comments:
Post a Comment