ಅಕ್ಟೋಬರ್ 27 ರಂದು ಉಸ್ತುವಾರಿ ಸಚಿವ ಗುಂಡೂರಾವ್ ಜಿಲ್ಲಾ ಪ್ರವಾಸ - Karavali Times ಅಕ್ಟೋಬರ್ 27 ರಂದು ಉಸ್ತುವಾರಿ ಸಚಿವ ಗುಂಡೂರಾವ್ ಜಿಲ್ಲಾ ಪ್ರವಾಸ - Karavali Times

728x90

25 October 2025

ಅಕ್ಟೋಬರ್ 27 ರಂದು ಉಸ್ತುವಾರಿ ಸಚಿವ ಗುಂಡೂರಾವ್ ಜಿಲ್ಲಾ ಪ್ರವಾಸ

ಮಂಗಳೂರು, ಅಕ್ಟೋಬರ್ 25, 2025 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಕ್ಟೊಬರ್ 27 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ 9.55ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು 10.30ಕ್ಕೆ ಕುಂಜತ್ತಬೈಲ್-ಮೂಡ ಲೇ ಔಟ್ ಸ್ಥಳ ಪರಿಶೀಲನೆ, 11.45ಕ್ಕೆ ಉರ್ವಾ ಮಾರುಕಟ್ಟೆ ಕಟ್ಟಡ ಕಾಮಗಾರಿ ಪರಿಶೀಲನೆ, ಮದ್ಯಾಹ್ನ 12.45ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ, 3.30ಕ್ಕೆ ಮುಖ್ಯಮಂತ್ರಿಗಳೊಂದಿಗೆ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ  ಇಂಟರ್ ನ್ಯಾಷನಲ್ ಚಾಲೆಂಜ್ 2025-ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 27 ರಂದು ಉಸ್ತುವಾರಿ ಸಚಿವ ಗುಂಡೂರಾವ್ ಜಿಲ್ಲಾ ಪ್ರವಾಸ Rating: 5 Reviewed By: karavali Times
Scroll to Top