ಬಂಟ್ವಾಳ, ಅಕ್ಟೋಬರ್ 14, 2025 (ಕರಾವಳಿ ಟೈಮ್ಸ್) : ತಾಲೂಕಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಮೊಹಮ್ಮದ್ ಹನೀಫ್ ಅವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಪರಿಣಾಮ ಬೆಂಕಿ ಆಕಸ್ಮಿಕ ಘಟನೆ ನಡೆದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ವರದಿಯಾಗಿದೆ.
ಘಟನೆಯಿಂದ ಮನೆಯ ವಿದ್ಯುತ್ ಉಪಕರಣಗಳು, ಪೀಠೋಪಕರಣಗಳು, ಕಪಾಟು ಸಹಿತ ಇತರ ಬೆಲೆ ಬಾಳುವ ಸೊತ್ತುಗಳು ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ದಾಖಲಾತಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಲ್ಲದೆ ಮನೆಯ ಗೋಡೆ ಬಿರುಕು ಬಿಟ್ಟಿದ್ದು, ನೆಲದ ಗ್ರಾನೈಟ್ ಗೂ ಹಾನಿ ಸಂಭವಿಸಿದೆ. ಬೆಂಕಿ ಅವಘಡದಿಂದ ಸುಮಾರು 7 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

















0 comments:
Post a Comment