ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತೊಂದರೆಯಾದಂತೆ ನೆರವು ನೀಡಿ : ಅಧಿಕಾರಿಗಳಿಗೆ ಭರತ್ ಮುಂಡೋಡಿ ಸೂಚನೆ - Karavali Times ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತೊಂದರೆಯಾದಂತೆ ನೆರವು ನೀಡಿ : ಅಧಿಕಾರಿಗಳಿಗೆ ಭರತ್ ಮುಂಡೋಡಿ ಸೂಚನೆ - Karavali Times

728x90

14 October 2025

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತೊಂದರೆಯಾದಂತೆ ನೆರವು ನೀಡಿ : ಅಧಿಕಾರಿಗಳಿಗೆ ಭರತ್ ಮುಂಡೋಡಿ ಸೂಚನೆ

 ಮಂಗಳೂರು, ಅಕ್ಟೋಬರ್ 14, 2025 (ಕರಾವಳಿ ಟೈಮ್ಸ್) : ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಸಮಸ್ಯೆಯಾದಲ್ಲಿ ಇಲಾಖಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಫಲಾನುಭವಿಗಳಿಗೆ  ನೆರವು ನೀಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.

ಅ 14 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ನಡೆದ ಜಿಲ್ಲಾ  ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿಯ ಎಲ್ಲಾ ಸದಸ್ಯರು ತಮ್ಮ ಹಂತದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದರು. 

ಅಪಘಾತ ತಡೆಗಟ್ಟಲು ಘಟಕಗಳಲ್ಲಿ ಚಾಲನಾ ಸಿಬ್ಬಂದಿಗಳಿಗೆ ಸುರಕ್ಷಿತ ಚಾಲನೆಯ ಕುರಿತು ನಿರಂತರವಾಗಿ ಸೂಕ್ತ ತಿಳುವಳಿಕೆಯನ್ನು ಈಗಾಗಲೇ ಘಟಕ/ ವಿಭಾಗೀಯ ಮಟ್ಟದಲ್ಲಿ ನೀಡುತ್ತಾ ಬರುತ್ತಿದ್ದು ಹಾಗೂ ನಿಗಮದ ತರಬೇತಿ ಕೇಂದ್ರಗಳಲ್ಲಿಯೂ ಸಹ ತರಬೇತಿಗಳನ್ನು ನೀಡುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು  ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು ಪರವಾನಗಿಯನ್ನು ದುರುಪಯೋಗ ಪಡಿಸಿಕೊಂಡು ಓಡಾಡುತ್ತಿದ್ದು,  ಬಸ್ಸಿನ ಪರವಾನಗಿಯನ್ನು ರದ್ದು ಮಾಡುವಂತೆ ಹಾಗೂ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು. ಯುವನಿಧಿ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಬೇಕು. ಯುವನಿಧಿ ಬಗ್ಗೆ ಅರಿವು ಮೂಡಿಸಲು ಯುವಜನತೆಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದವರು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 3,79,557 ಫಲಾನುಭವಿಗಳು ನೋಂದಾಯಿಸಿಕೊಂಡಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು. ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅನುಕೂಲವಾದ ಬಗ್ಗೆ ಯಶೋಗಾಥೆ, ಪ್ರತಿ ತಾಲೂಕಿನಿಂದ ಸಾಕ್ಷ್ಯ ಚಿತ್ರಗಳನ್ನು ಮಾಡಬೇಕು ಎಂದವರು ಹೇಳಿದರು.

ಇದೇ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ನೇತೃತ್ವದಲ್ಲಿ ಮೈಸೂರು ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ,  ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸು?Á?ಮ ಕೆ.ಎಸ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿ.ಎ, ಶಾಹುಲ್ ಹಮೀದ್ ಕೆ, ಉಮಾನಾಥ್ ಶೆಟ್ಟಿ, ಬಿ ಪದ್ಮನಾಭ ಸಾಲ್ಯಾನ್, ಸುರೇಂದ್ರ ಕಂಬಳಿ, ರಂಜಿತ್ ರೈ, ಆಲ್‍ಸ್ಟನ್ ಕ್ಲೈವ್ ಡಿ ಕುನ್ಹ, ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತೊಂದರೆಯಾದಂತೆ ನೆರವು ನೀಡಿ : ಅಧಿಕಾರಿಗಳಿಗೆ ಭರತ್ ಮುಂಡೋಡಿ ಸೂಚನೆ Rating: 5 Reviewed By: karavali Times
Scroll to Top