ಗುಡ್ಡೆಅಂಗಡಿ : ಅಟೋ ರಿಕ್ಷಾ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿಗೆ ಗಾಯ - Karavali Times ಗುಡ್ಡೆಅಂಗಡಿ : ಅಟೋ ರಿಕ್ಷಾ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿಗೆ ಗಾಯ - Karavali Times

728x90

9 October 2025

ಗುಡ್ಡೆಅಂಗಡಿ : ಅಟೋ ರಿಕ್ಷಾ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿಗೆ ಗಾಯ

ಬಂಟ್ವಾಳ, ಅಕ್ಟೋಬರ್ 09, 2025 (ಕರಾವಳಿ ಟೈಮ್ಸ್) : ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿಗೆ ಅಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್-ಗುಡ್ಡೆಅಂಗಡಿ ರಿಧಾನ್ ಮಂಧಿ ಹೋಟೆಲ್ ಬಳಿ ಅ 7 ರಂದು ಸಂಜೆ ಸಂಭವಿಸಿದೆ. 

ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಉಮ್ಮರ್ ಫಾರೂಕ್ ಎಂದು ಹೆಸರಿಸಲಾಗಿದೆ. ಇವರು ಗುಡ್ಡೆಅಂಗಡಿ ಎಂಬಲ್ಲಿ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ದಾಟುತ್ತಿದ್ದ ವೇಳೆ ಮಾರ್ನಬೈಲು ಕಡೆಯಿಂದ ವೇಗವಾಗಿ ಬಂದ ನೋಂದಣಿ ಸಂಖ್ಯೆ ಕೆಎ19 ಎಡಿ1456 ರ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಅಪಘಾತದಿಂದ ರಸ್ತೆಗೆ ಬಿದ್ದ ಉಮ್ಮರ್ ಫಾರೂಕ್ ಅವರ ಹಣೆ, ಮೂಗು ಹಾಗೂ ಕೈಗೆ ಗಾಯವಾಗಿದೆ. ತಕ್ಷಣ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಾಗಿ ಮಂಗಳೂರು-ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ದಾಸರಗುಡ್ಡೆ ನಿವಾಸಿ ಅಬ್ದುಲ್ ರಹಿಮಾನ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಗುಡ್ಡೆಅಂಗಡಿ : ಅಟೋ ರಿಕ್ಷಾ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿಗೆ ಗಾಯ Rating: 5 Reviewed By: karavali Times
Scroll to Top