ಬಂಟ್ವಾಳ, ಅಕ್ಟೋಬರ್ 18, 2025 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಶನಿವಾರ ಸಂಜೆಯಿಂದ ರಾತ್ರಿವರೆಗೂ ಸಿಡಿಲು, ಮಿಂಚು ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಬಿ ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಮನೆಯೊಂದರ ಅವರಣ ಗೋಡೆ ಕುಸಿದು ಸಮೀಪದ ಮನೆಗಳಿಗೆ ಹಾನಿ ಸಂಭವಿಸಿದೆ.
ಸ್ಥಳೀಯ ನಿವಾಸಿಗಳಾದ ಇಶಾಕ್ ಹಾಗೂ ಅಬ್ದುಲ್ಲಾ ಯಾನೆ ಬಾವಕ ಎಂಬವರ ವಾಸದ ಮನೆಗಳಿಗೆ ಆವರಣ ಗೋಡೆ ಕುಸಿದು ಬಿದ್ದು ಹಾನಿ ಸಂಭವಿಸಿ ಭಾರೀ ನಷ್ಟ ಸಂಭವಿಸಿದೆ. ಘಟನೆಯಿಂದ ಮನೆ ಮಂದಿ ಅದೃಷ್ಟವಶಾತ್ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



















0 comments:
Post a Comment